February 2, 2026

ಕುಖ್ಯಾತ ರೌಡಿ ಪೊಲೀಸರ ಎನ್ ಕೌಂಟರ್ ಗೆ ಬಲಿ

0
Screenshot_2022-03-17-13-51-59-27_680d03679600f7af0b4c700c6b270fe7.jpg

ಚೆನ್ನೈ: ಕುಖ್ಯಾತ ರೌಡಿ ನಿರವಿ ಮುರುಗನ್ ಎಂಬಾತನನ್ನು ದಿಂಡಿಗಲ್ ಪೊಲೀಸರು ಎನ್ ಕೌಂಟರ್ ನಲ್ಲಿ ಹತ್ಯೆಗೈದಿರುವ ಘಟನೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ನಂಗುನೇರಿ ಸಮೀಪ ನಡೆದಿದೆ.

ತಿರುನಲ್ವೇಲಿ, ಟುಟಿಕೋರಿನ್ ಮತ್ತು ಕನ್ಯಾಕುಮಾರಿ ಜಿಲ್ಲೆಗಳಲ್ಲಿ ಕೊಲೆ, ಅಪಹರಣ ಸೇರಿದಂತೆ ಸುಮಾರು 60ಕ್ಕೂ ಅಧಿಕ ಪ್ರಕರಣಗಳು ನಿರವಿ ಮುರುಗನ್ ವಿರುದ್ಧ ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು 60ಕ್ಕೂ ಅಧಿಕ ಪ್ರಕರಣಗಳಲ್ಲಿ ಆರೋಪಿಯಾಗಿರುವ ಮುರುಗನ್, ದಿಂಡಿಗಲ್ ನ ಒಡ್ಡಾನ್ ಚತ್ರಂ ಪ್ರದೇಶದಲ್ಲಿ ನಡೆದ ದರೋಡೆ ಪ್ರಕರಣದ ಶಂಕಿತ ಆರೋಪಿಗಳಲ್ಲಿ ಒಬ್ಬನಾಗಿದ್ದ.

ದಿಂಡಿಗಲ್ ನ ವಿಶೇಷ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿದ ವೇಳೆ ಮುರುಗನ್ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಇನ್ಸ್ ಪೆಕ್ಟರ್ ಎಸಕ್ಕಿರಾಜಾ ಮುರುಗನ್ ಮೇಲೆ ಗುಂಡು ಹಾರಿಸಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!