August 21, 2026

ಡೆತ್ ನೋಟ್ ಬರೆದಿಟ್ಟು ಕಾನ್‌ಸ್ಟೆಬಲ್‌ ಆತ್ಮಹತ್ಯೆ: ಪತ್ರಕರ್ತರು ಸೇರಿ 9 ಜನರ ವಿರುದ್ಧ ಎಫ್ಐಆರ್ ದಾಖಲು

0
Screenshot_2022-03-18-09-15-30-36_680d03679600f7af0b4c700c6b270fe7.jpg

ಗದಗ: ಬೆಟಗೇರಿ ಬಡಾವಣೆ ಪೊಲೀಸ್‌ ಠಾಣೆಯ ಪೊಲೀಸ್‌ ಕಾನ್‌ಸ್ಟೆಬಲ್‌ ಪಿ.ಸಿ.ಪಾಟೀಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವ್ಯಕ್ತಿಯ ತಂದೆ ಚನ್ನವೀರಗೌಡ ಶಂಕರಗೌಡ ಪಾಟೀಲ ಅವರು ನೀಡಿದ ದೂರಿನಂತೆ ಇಬ್ಬರು ಪತ್ರಕರ್ತರು, ಐವರು ಪೊಲೀಸರು ಸೇರಿದಂತೆ ಒಟ್ಟು ಒಂಬತ್ತು ಮಂದಿ ಮೇಲೆ ಗದಗ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಟಗೇರಿ ಬಡಾವಣೆ ಪೊಲೀಸ್‌ ಠಾಣೆಯ ಸಿಬ್ಬಂದಿ ಪುಟ್ಟಪ್ಪ ಕೌಜಲಗಿ, ಸಿ.ವಿ.ನಾಯ್ಕರ, ಗದಗ ಸಂಚಾರ ಠಾಣೆಯ ದಾದಾಪೀರ ಮಂಜಲಾಪೂರ, ಗದಗ ಸೆನ್‌ ಠಾಣೆಯ ಶರಣಪ್ಪ ಅಂಗಡಿ, ಮುಂಡರಗಿ ಠಾಣೆಯ ಅಂದಪ್ಪ ಹಣಜಿ ಹಾಗೂ ಪತ್ರಕರ್ತ ಗಿರೀಶ ಕುಲಕರ್ಣಿ, ಖಾಸಗಿ ವಾಹಿನಿ ವರದಿಗಾರ ಭೀಮನಗೌಡ ಪಾಟೀಲ, ಗುರುರಾಜ ಬಸವರಾಜ ತಿಳ್ಳಿಹಾಳ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

‘ಬೆಟಗೇರಿ ಬಡಾವಣೆ ಪೊಲೀಸ್‌ ಠಾಣೆಯಲ್ಲಿ ಪೊಲೀಸ್‌ ಕಾನ್‌ಸ್ಟೆಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿ.ಸಿ.ಪಾಟೀಲ ಅವರಿಗೆ ಆರೋಪಿಗಳಾದ ಗಿರೀಶ ಕುಲಕರ್ಣಿ, ಗುರುರಾಜ ತಿಳ್ಳಿಹಾಳ, ವಿಠ್ಠಲ ಚಿದಾನಂದ ಹಬೀಬ, ಭೀಮನಗೌಡ ಪಾಟೀಲ ವಿನಾಕಾರಣ ತೊಂದರೆ ನೀಡುತ್ತಾ, ಬ್ಲಾಕ್‌ ಮೇಲ್‌ ಮಾಡುತ್ತಿದ್ದರು’ ಎಂದು ಮೃತ ವ್ಯಕ್ತಿಯ ತಂದೆ ಚನ್ನವೀರಗೌಡ ದೂರಿನಲ್ಲಿ ತಿಳಿಸಿದ್ದಾರೆ.

‘ಖಾಸಗಿ ವಿಷಯದ ಸಂದೇಶ ಮತ್ತು ಪೋಟೊಗಳು ನಮ್ಮ ಬಳಿ ಇದ್ದು, ಅದನ್ನು ಎಸ್‌ಪಿಗೆ ತೋರಿಸುವುದಾಗಿ ಬೆದರಿಕೆ ಒಡ್ಡುತ್ತಿದ್ದರು. ಅಲ್ಲದೇ, ಎಲ್ಲ ಆರೋಪಿಗಳು ಮೇಲಿಂದ ಮೇಲೆ ಕಿರುಕುಳ ನೀಡುತ್ತಿದ್ದರು. ಇದರಿಂದ ತೀವ್ರ ಕುಗ್ಗಿ ಹೋಗಿದ್ದ ಪಿ.ಸಿ.ಪಾಟೀಲ ಮಾರ್ಚ್‌ 16ರಂದು ಡೆತ್‌ನೋಟ್‌ ಬರೆದಿಟ್ಟು, ಲಕ್ಕುಂಡಿಯಲ್ಲಿರುವ ಮನೆಯಲ್ಲಿ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾರೆ. ಅವರ ಸಾವಿಗೆ ಒಂಬತ್ತು ಮಂದಿ ಆರೋಪಿಗಳೇ ಕಾರಣ’ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!