August 21, 2026

ಬೋಳಿಯಾರ್ ಗ್ರಾಮದ ಯುವಕ ನಾಪತ್ತೆ: ಪತ್ತೆಗೆ ಮನವಿ

0
image_editor_output_image-330322137-1647594026768.jpg

ಕೊಣಾಜೆ: ಬೋಳಿಯಾರ್ ಗ್ರಾಮದ ಕಾಪಿಕಾಡು ಎಂಬಲ್ಲಿ ವಾಸ್ತವ್ಯ ಹೂಡಿದ್ದ ಹೈದರ್ ಎಂಬವರ ಪುತ್ರ ಅಬ್ದುಲ್ ರಹಿಮಾನ್ (16) ನಾಪತ್ತೆಯಾಗಿದ್ದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಂಭತ್ತನೇ ತರಗತಿ ವಿದ್ಯಾರ್ಥಿಯಾಗಿದ್ದ ಈತ ಮುಡಿಪುವಿನ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ.

ಆದರೆ ಏಕಾಏಕಿ ಅಬ್ದುಲ್ ರಹಿಮಾನ್ ಕಾಣೆಯಾಗಿರುವುದಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಈತ ಬುಧವಾರ ಸಂಜೆ 5.30 ರ ನಂತರ ಕಾಣೆಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!