August 21, 2026

ಬೆಳ್ತಂಗಡಿ: ಬಸ್ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ: ಉಪ್ಪಿನಂಗಡಿಯ ಇಬ್ಬರು ಯುವಕರು ಮೃತ್ಯು

0
IMG-20220318-WA0098

ಉಪ್ಪಿನಂಗಡಿ: ಕೆಎಸ್ಸೆಆರ್ಟಿಸಿ ಬಸ್ ಗೆ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ವೇಣೂರು ಬಳಿಯ ನಂದಿಬೆಟ್ಟು ಎಂಬಲ್ಲಿ ನಡೆದಿದೆ.

ಉಪ್ಪಿನಂಗಡಿ ಸಮೀಪದ ಹಿರೆಬಂಡಾಡಿಯ ರಜಾಕ್ ಮಾಸ್ಟರ್ ಪುತ್ರರಾದ ಶಿರಾಜ್, ಸಾದಿಕ್ ಮೃತ ದುರ್ದೈವಿಗಳು.

ಮೃತದೇಹ ಬೆಳ್ತಂಗಡಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಓರ್ವ ಘಟನೆಯಲ್ಲಿ ಸ್ಥಳದಲ್ಲಿ ಮೃತಪಟ್ಟಿದ್ದು, ಇನ್ನೋರ್ವ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.


ಬೆಳ್ತಂಗಡಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ KSRTC ಬಸ್ ಬೈಕಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಯುವಕರಿಬ್ಬರು ಮೃತಪಟ್ಟಿದ್ದಾರೆ.

ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

Leave a Reply

Your email address will not be published. Required fields are marked *

You may have missed

error: Content is protected !!