ಪಳವಳ್ಳಿ ಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: ನಾಲ್ವರು ಮೃತ್ಯು
ಪಾವಗಡ: ತಾಲ್ಲೂಕಿನ ಪಳವಳ್ಳಿ ಕಟ್ಟೆ ಬಳಿ ಶನಿವಾರ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಅಪಘಾತಕ್ಕೀಡಾಗಿದ್ದು, ನಾಲ್ವರು ಮೃತಪಟ್ಟಿದ್ದಾರೆ.
ತಾಲೂಕಿನ ವೈ ಎನ್.ಹೊಸಕೋಟೆಯಿಂದ ಪಾವಗಡದ ಕಡೆ ಆಗಮಿಸುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ.
ತೀವ್ರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿಕತ್ಸೆಗಾಗಿ ತುಮಕೂರು, ಬೆಂಗಳೂರು ಆಸ್ಪತ್ರೆಗೆ ಕಳುಹಿಸಲಾಗಿದೆ. 25ಕ್ಕೂ ಹೆಚ್ಚಿನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.




