March 23, 2026

ಕಾಪು ಮಾರಿಗುಡಿಗಳಲ್ಲಿ ಮಾರಿ ಪೂಜೆ: ಮುಸ್ಲಿಮರ ವ್ಯಾಪಾರಕ್ಕೆ ನಿಷೇಧ

0
image_editor_output_image-76940489-1647673205012.jpg

ಕಾಪು: ಕಾಪುವಿನ ಮೂರು ಮಾರಿಗುಡಿಗಳಲ್ಲಿ ಮಾ.22 ಹಾಗೂ 23ರಂದು ನಡೆಯುವ ಸುಗ್ಗಿ ಮಾರಿ ಪೂಜೆಯಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ಅಂಗಡಿಗಳನ್ನು ನೀಡಬಾರದು ಎಂದು ಹಿಂದೂ ಕಾರ್ಯಕರ್ತರು ಕಾಪು ಪುರಸಭೆ ಮುಖ್ಯಾಧಿಕಾರಿಗೆ ಮನವಿ ಮಾಡಿದ್ದಾರೆ.

‘ಸುಗ್ಗಿ ಮಾರಿ ಪೂಜೆಯ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದವರಿಗೆ ಅಂಗಡಿ, ಸ್ಟಾಲ್‌ಗಳನ್ನು ಹಾಕಲು ಅವಕಾಶ ಕೊಟ್ಟರೆ ಮುಂದೆ ಎದುರಾಗುವ ತೊಂದರೆ ಹಾಗೂ ಅನಾಹುತಗಳಿಗೆ ನೀವೇ ಜವಾಬ್ದಾರರು’ ಎಂದು ಮನವಿಯಲ್ಲಿ ಎಚ್ಚರಿಕೆ ನೀಡಲಾಗಿದೆ.

ಸುಗ್ಗಿ ಮಾರಿ ಪೂಜೆಯಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರ ಮಾಡಲು ಅವಕಾಶ ನೀಡಬೇಕು ಎಂದು ಹಿಂದೂ ಸಂಘಟನೆಗಳು ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ ಸಲ್ಲಿಸಿವೆ. ಇಲಾಖೆಯ ಕಾಯ್ದೆಯ ಪ್ರಕಾರ ದೇವಸ್ಥಾನಕ್ಕೆ ಸೇರಿದ ಕಟ್ಟಡ ಹಾಗೂ ನಿವೇಶನಗಳನ್ನು ಹಿಂದೂಗಳಲ್ಲದವರಿಗೆ ಗುತ್ತಿಗೆ ನೀಡುವಂತಿಲ್ಲ. ಅದರಂತೆ ಸುಗ್ಗಿ ಮಾರಿ ಜಾತ್ರೆಯಲ್ಲಿ ಕೇವಲ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅಂಗಡಿಗಳನ್ನು ನೀಡಲು ದೇವಸ್ಥಾನದ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ’ ಎಂದು ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!