ಮೂಲ್ಕಿ: ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ
ಮೂಲ್ಕಿ: ಕಲ್ಲಿನಿಂದ ಜಜ್ಜಿ ವ್ಯಕ್ತಿಯೋರ್ವರನ್ನು ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ಮೂಲ್ಕಿಯ ಬಸ್ ನಿಲ್ದಾಣದ ಬಳಿ ಸಂಭವಿಸಿದೆ. ನಿನ್ನೆ ರಾತ್ರಿ ಹತ್ಯೆ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, ಘಟನೆ ಇಂದು ಬೆಳಕಿಗೆ ಬಂದಿದೆ.
ಅಂದಾಜು 45 ವಯಸ್ಸಿನ ವ್ಯಕ್ತಿ ಇದಾಗಿದ್ದು, ನಿನ್ನೆ ರಾತ್ರಿ ಯಾವುದೋ ಕಾರಣಕ್ಕೆ ಗಲಾಟೆ ನಡೆಸಿ ಈತನನ್ನು ಕಲ್ಲಿನಿಂದ ಜಜ್ಜಿ ಆರೋಪಿಗಳು ಪರಾರಿಯಾಗಿರುವ ಸಾಧ್ಯತೆ ಇದೆ. ವ್ಯಕ್ತಿಯ ಕುರಿತು ಮಾಹಿತಿ ತಿಳಿದುಬಂದಿಲ್ಲ.
ಬೆಳಿಗ್ಗೆ ಬಸ್ ಸ್ಟ್ಯಾಂಡಿಗೆ ಬಂದಿರುವ ಪ್ರಯಾಣಿಕರು ಮೃತದೇಹ ಗಮನಿಸಿ ಮೂಲ್ಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅವರು ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ್ದಾರೆ.





