March 23, 2026

ಆಕ್ಸಿಜನ್ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡ: ಮೂವರು ಗಾಯ

0
childrens-ward-of-kamla-nehru-hospital-in-bhopal-catches-fire.jpg

ಕುರುಗೋಡು: ಕುಡತಿನಿಯ ಬಳಿಯ ಬಳ್ಳಾರಿ ಶಾಖೋತ್ಪನ್ನ (ಬಿಟಿಪಿಎಸ್) ಕೇಂದ್ರದಲ್ಲಿ ಆಕ್ಸಿಜನ್ ಉತ್ಪಾದನಾ ಘಟಕದಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೂವರು ಕಾರ್ಮಿಕರು ಗಾಯಗೊಂಡ ಘಟನೆ ವರದಿಯಾಗಿದೆ. ಗಾಯಾಳುಗಳ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳನ್ನು ಪ್ರಶಾಂತ್, ಅಂಕುಶ್, ಚಂದ್ರು ಎಂದು ಗುರುತಿಸಲಾಗಿದೆ.

ಆಕ್ಸಿಜನ್ ಉತ್ಪಾದನಾ ಘಟಕದಲ್ಲಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾಗಲೇ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ಈ ವೇಳೆ ಕರ್ತವ್ಯನಿರತ ಕಾರ್ಮಿಕರ ಮೇಲೆ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿ ಹೊತ್ತಿಕೊಂಡಿದ್ದ ದೇಹದೊಂದಿಗೇ ಕಾರ್ಮಿಕರು ಹೊರಗೋಡಿ ಬಂದು ರಕ್ಷಣೆಗೆ ಕೂಗಿಕೊಂಡಿದ್ದಾರೆ. ಆದರೂ ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ.

ಘಟನೆ ಸಂಬಂಧಿಸಿ ಬಿಟಿಪಿಎಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಕುಡತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Leave a Reply

Your email address will not be published. Required fields are marked *

error: Content is protected !!