June 30, 2026

ಹಿಜಾಬ್ ತೀರ್ಪು ನೀಡಿದ ನ್ಯಾಯಾಧೀಶರಿಗೆ ‘ವೈ’ ಶ್ರೇಣಿಯ ಭದ್ರತೆ: ಬಸವರಾಜ ಬೊಮ್ಮಾಯಿ

0
bommai.jpg

ಬೆಂಗಳೂರು: ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ತೀರ್ಪು ನೀಡಿದ ನ್ಯಾಯಾಧೀಶರಿಗೆ ಸರ್ಕಾರದಿಂದ ‘ವೈ’ ಶ್ರೇಣಿಯ ಭದ್ರತೆ ನೀಡಲು ನಿರ್ಧರಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ತೀರ್ಪು ನೀಡಿದ ಮೂವರು ನ್ಯಾಯಮೂರ್ತಿಗಳಿಗೆ ಕೆಲವರು ಜೀವ ಬೆದರಿಕೆ ಹಾಕಿರುವ ಬಗ್ಗೆ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಪಾರದರ್ಶಕವಾಗಿ ಕೂಲಂಕುಷ ತನಿಖೆ ನಡೆಸಬೇಕು ಎಂಬುದಾಗಿ ಡಿಜಿ ಮತ್ತು ಐಜಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ನ್ಯಾಯಮೂರ್ತಿಗಳಾದ ರಿತುರಾಜ್‌ ಅವಸ್ಥಿ, ನ್ಯಾ. ಕೃಷ್ಣ ಎಸ್‌. ದೀಕ್ಷಿತ್‌, ನ್ಯಾ. ಖಾಜಿ ಜೈಬುನ್ನಿಸಾ ಅವರಿಗೆ “ವೈ” ಶ್ರೇಣಿಯ ಭದ್ರತೆ ಕಲ್ಪಿಸಲಾಗುವುದು ಎಂದರು.

ಹಿಜಾಬ್ ಕುರಿತಾಗಿ ತೀರ್ಪು ನೀಡಿದ್ದ ನ್ಯಾಯಮೂರ್ತಿಗಳಿಗೆ ತಮಿಳುನಾಡಿನ ತೌಹೀದ್ ಜಮಾತ್ ಸಂಘಟನೆಯಲ್ಲಿ ತೊಡಗಿಸಿಕೊಂಡ ಕೊವಾಯಿ ಆರ್‌. ರೆಹಮತುಲ್ಲಾ ಮತ್ತಿತರರು ಬಹಿರಂಗವಾಗಿಯೇ ಕೊಲೆ ಬೆದರಿಕೆ ಹಾಕಿದ್ದರು. ಬಳಿಕ ತಲೆಮರೆಸಿಕೊಂಡ ಆರೋಪಿಗಳ ಪೈಕಿ ರೆಹಮತುಲ್ಲಾ ಸಹಿತ ಇಬ್ಬರನ್ನು ಈಗಾಗಲೇ ಬಂಧಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!