ಮಂಗಳೂರು: ಗುದನಾಳದಲ್ಲಿ ಅಕ್ರಮ ಚಿನ್ನ ಸಾಗಾಟ: 36 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶ
ಮಂಗಳೂರು: ಗುದನಾಳದಲ್ಲಿ 36 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಬಚ್ಚಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಆರೋಪಿಯು ಪೇಸ್ಟ್ ರೂಪದಲ್ಲಿ ಚಿನ್ನವನ್ನು ಗುದನಾಳದಲ್ಲಿ ಬಚ್ಚಿಟ್ಟುಕೊಂಡು ಸಾಗಿಸಲು ಯತ್ನಿಸುತ್ತಿದ್ದ.
ಆರೋಪಿಯಿಂದ 24 ಕ್ಯಾರೆಟ್‌ನ 706 ಗ್ರಾಂ ಚಿನ್ನ ಪತ್ತೆಯಾಗಿದೆ. ಆತನಿಂದ ಚಿನ್ನಾಭರಣವನ್ನು ವಶ ಪಡೆದುಕೊಳ್ಳಲಾಗಿದೆ.
ವಶಪಡಿಸಿಕೊಂಡ ಒಟ್ಟು ಚಿನ್ನದ ಮೌಲ್ಯ 36,53,550 ರೂಪಾಯಿ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.




