August 14, 2026

ವಿಟ್ಲ: ಕ್ರಿಕೆಟ್ ಆಟದ ವಿಚಾರವಾಗಿ ಅಪ್ರಾಪ್ತನ ಮೇಲೆ ಯುವಕನಿಂದ ಮಾರಣಾಂತಿಕ ಹಲ್ಲೆ

0
image_editor_output_image825591405-1647789068664.jpg

ವಿಟ್ಲ: ಕ್ರಿಕೆಟ್ ಆಟದ ವಿಚಾರವಾಗಿ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ.

ಕೊಳ್ನಾಡು ಗ್ರಾಮದ ಕುಲ್ಯಾರು ನಿವಾಸಿ ಅಬ್ದುಲ್ ರಹಿಮಾನ್ ಪುತ್ರ ಶಫೀಕ್(17) ಎಂಬಾತ ಗಂಭೀರ ಗಾಯಗೊಂಡಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಾಲಕನ ಮೇಲೆ ಅದೇ ಊರಿನ ಅಬ್ದುಲ್ ಖಾದರ್ ಅವರ ಪುತ್ರ ಕಬೀರ್ ಕ್ಷುಲ್ಲಕ ವಿಚಾರವಾಗಿ ಮಾರಣಾಂತಿಕ ಹಲ್ಲೆ ನಡೆಸಿದ್ದು ಗಾಯಾಳುವನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಟ್ಲ ಠಾಣೆಗೆ ಗಾಯಾಳು ತಂದೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!