August 14, 2026

ಯುವ ಕಾಂಗ್ರೆಸ್ ಪಾಣೆಮಂಗಳೂರು ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಸಿರಾಜ್ ಮದಕ ನೇಮಕ

0
image_editor_output_image850526472-1647794230285.jpg

ಬಂಟ್ವಾಳ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯುವ ಕಾಂಗ್ರೆಸ್ ಪಾಣೆಮಂಗಳೂರು ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಸಿರಾಜ್ ಮದಕ ಅವರನ್ನು ನೇಮಕ ಮಾಡಲಾಗಿದೆ.

ವಿಟ್ಲ ಪಡ್ನೂರು ವಲಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಕನ್ಯಾನ, ಕರೋಪಾಡಿ ವಲಯ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ ಸಿರಾಜ್ ಮದಕ ಅವರನ್ನು ಮಾಜಿ ಸಚಿವರಾದ ಶ್ರೀ ಬಿ ರಮಾನಾಥ ರೈ ಅವರ ವಿಶೇಷ ಶಿಫಾರಸ್ಸಿನ ಮೇರೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಅವರ ಸೂಚನೆಯಂತೆ ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ನೇಮಕಾತಿ ಆದೇಶ ಹೊರಡಿಸಿದ್ದಾರೆ.

ಮಾರ್ಚ್ 19 ಶನಿವಾರ ಬಿಸಿ‌ ರೋಡ್ ಪೂಂಜಾ ಮೈದಾನದಲ್ಲಿ ನಡೆದ ಯುವಕರ ನಡೆ ಸಾಮರಸ್ಯದ ಕಡೆ ಸಮಾವೇಶದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ನೇಮಕಾತಿ ಆದೇಶ ಪತ್ರ ಹಸ್ತಾಂತರ ಮಾಡಿದರು.

ರಾಜ್ಯ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೆರಿಲ್ ರೇಗೋ, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಗಿರೀಶ್ ಆಳ್ವ, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರ ಪ್ರಕಾಶ್ ಶೆಟ್ಟಿ, ಮಮತಾ ಗಟ್ಟಿ, ಬ್ಲಾಕ್ ಅಧ್ಯಕ್ಷರುಗಳಾದ ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಅಸಂಘಟಿತ ಕಾರ್ಮಿಕ ಘಟಕ ಜಿಲ್ಲಾಧ್ಯಕ್ಷ ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷರಾದ ಅರ್ಶದ್ ಸರವು, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಮೋದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!