ಆರ್‌ಬಿಐ ಗವರ್ನರ್ ಆಗಿ ಶಕ್ತಿಕಾಂತ ದಾಸ್ ಮರು ನೇಮಕ

ದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)ನ ಹಾಲಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಡಿಸೆಂಬರ್ 10 ರ ನಂತರದ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಅದೇ ಸ್ಥಾನಕ್ಕೆ ಮರು ನೇಮಕ ಮಾಡಲಾಗಿದೆ.
ಕೇಂದ್ರ ಸಂಪುಟದ ನೇಮಕಾತಿ ಸಮಿತಿ ಗುರುವಾರ ತಡರಾತ್ರಿ ಮರು ನೇಮಕಾತಿ ನಿರ್ಧಾರಕ್ಕೆ ಅನುಮೋದನೆ ನೀಡಿದೆ.
ದಾಸ್ ಅವರು ಈ ಹಿಂದೆ ಹಣಕಾಸು ಸಚಿವಾಲಯದಲ್ಲಿ ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿದ್ದರು. 2018ರ ಡಿಸೆಂಬರ್ 11 ರಂದು ಮೂರು ವರ್ಷಗಳ ಅವಧಿಗೆ ಅವರನ್ನು ರಿಸರ್ವ್ ಬ್ಯಾಂಕ್‌ನ ಗವರ್ನರ್ ಆಗಿ ನೇಮಕ ಮಾಡಲಾಗಿತ್ತು.