March 23, 2026

ಕಾಸರಗೋಡು: 11 ವರ್ಷದ ಬಾಲಕಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

0
image_editor_output_image2135388128-1647847010764.jpg

ಕಾಸರಗೋಡು: ಅಪ್ರಾಪ್ತ ಬಾಲಕಿಯೋರ್ವಳು ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮೇಲ್ಪರಂಬದಲ್ಲಿ ಭಾನುವಾರ ನಡೆದಿದೆ.

ಮೃತ ಪಟ್ಟ ಬಾಲಕಿಯನ್ನು ಮೇಲ್ಪರಂಬ ಕಡೆಂಗೋಡಿನ ಅಬ್ದುಲ್ ರಹಮಾನ್ ರವರ ಪುತ್ರಿ ಶಾಹಿನಾ (11) ಎಂದು ಗುರುತಿಸಲಾಗಿದೆ.

ಬಾಲಕಿ ಮೊಬೈಲ್ ಗೇಮ್ ಆಡುತ್ತಿದ್ದುದನ್ನು ಗಮನಿಸಿದ್ದ ತಾಯಿ ಮೊಬೈಲ್ ಕಿತ್ತು ಕೊಂಡಿದ್ದರು ಎನ್ನಲಾಗಿದೆ. ಇದಾದ ಬಳಿಕ ರಾತ್ರಿ ಕಿಟಿಕಿಗೆ ಚೂಡಿದಾರ್ ಶಾಲಿನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಇದನ್ನು ಗಮನಿಸಿದ ಮನೆಯವರು ಹಾಗೂ ಪರಿಸರವಾಸಿಗಳು ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.

ಮೃತ ದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆ ಶವಾಗಾರದಲ್ಲಿರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಾಗುವುದು. ಮೇಲ್ಪರಂಬ ಠಾಣಾ ಪೊಲೀಸರು ಅಸಹಜ ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!