March 23, 2026

ವಾಮಂಜೂರು ಸೈಂಟ್ ರೇಮಂಡ್‌ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ನಿರಾಕರಣೆ: ಹಿಜಾಬ್ ತೆಗೆದು ಪರೀಕ್ಷೆ ಬರೆಯಲ್ಲ ಎಂದು ವಿದ್ಯಾರ್ಥಿನಿಯರು

0
image_editor_output_image121658182-1647870883164.jpg

ಮಂಗಳೂರು: ನಗರದ ವಾಮಂಜೂರಿನಲ್ಲಿರುವ ಸೈಂಟ್ ರೇಮಂಡ್‌ ಶಿಕ್ಷಣ ಸಂಸ್ಥೆಗಳ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ಪರೀಕ್ಷೆ ಬರೆಯಲು ನಿರಾಕರಿಸಿದ್ದಾರೆ.

ಹೈಕೋರ್ಟ್‌ ಹಿಜಾಬ್‌ ಕುರಿತಂತೆ ತೀರ್ಪು ನೀಡಿದ ಬಳಿಕವೂ ಮತ್ತೆ ಕಾಲೇಜಿನಲ್ಲಿ ಘಟನೆ ಸಂಭವಿಸಿದೆ.

ನಗರ ಹೊರವಲಯದಲ್ಲಿರುವ ವಾಮಂಜೂರಿನ ಸೈಂಟ್‌ ರೇಮಂಡ್ಸ್‌ ಕಾಲೇಜಿನಲ್ಲಿ ಇಕಾನಾಮಿಕ್ಸ್‌ ಬರೆಯಲು ಇಂದು ಕಾಲೇಜಿಗೆ ಬಂದ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಪರೀಕ್ಷೆಗೆ ಬರೆಯಲು ಅವಕಾಶ ನೀಡದೇ ನಿರಾಕರಿಸಿದ್ದಾರೆ ಎಂದು ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆ ವಿರುದ್ಧ ಆರೋಪಿಸಿದ್ದಾರೆ.

ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿಜಾಬ್‌ ಧಾರಿ ವಿದ್ಯಾರ್ಥಿನಿಯರು, ಇದುವರೆಗೆ ನಾವು ಎಲ್ಲಾ ಪರೀಕ್ಷೆಗಳಲ್ಲೂ ಹಿಜಾಬ್‌ ಧರಿಸಿ ಪರೀಕ್ಷೆ ಬರೆದಿದ್ದೇವೆ. ಆದರೆ ಏಕಾಏಕಿ ನಮ್ಮನ್ನು ಪರೀಕ್ಷೆ ಬರೆಯಲು ಇಂದು ಅವಕಾಶ ನೀಡಿಲ್ಲ.

ನಮಗೆ ಎಲ್ಲಾ ಸೌಲಭ್ಯ ನೀಡುತ್ತೇವೆ ಎಂದು ನಮ್ಮ ಪ್ರವೇಶದ ಸಂದರ್ಭದಲ್ಲಿ ಹೇಳಿದ ಪ್ರಾಂಶುಪಾಲರು ಈಗ ನಮ್ಮನ್ನು ಮಾಸ್ಕ್‌ ಮತ್ತು ಸ್ಕಾರ್ಫ್‌ ಹಾಕಿ ಟೆರರಿಸ್ಟ್‌ ತರ ಕಾಣುತ್ತಿದ್ದೇವೆ ಎಂದು ಆರೋಪಿಸಿದ್ದಾರೆ.

ಕಾಲೇಜಿನ ಪ್ರಾಂಶುಪಾಲರು ಸಹಿತ ಶಿಕ್ಷಕಿ ಕೂಡಾ ನಮ್ಮನ್ನು ನಿಂದಿಸಿದ್ದಾರೆ. ನಮ್ಮನ್ನು ತಾರತಮ್ಯ ಭಾವನೆಯಿಂದ ನೋಡಲಾಗುತ್ತಿದೆ. ಇದನ್ನು ನಾವು ಸಹಿಸಲ್ಲ. ಶಿಕ್ಷಣ ಸಂಸ್ಥೆಯ ನೀತಿ ವಿರುದ್ಧ ವಿದ್ಯಾರ್ಥಿನಿಯರು ಆಕ್ರೋಶ ವ್ಯಕ್ತಪಡಿಸಿದರು.

ಇಂದು ಪರೀಕ್ಷೆ ಬರೆಯದೇ 26 ವಿದ್ಯಾರ್ಥಿಗಳು ಹಾಗೂ 18 ವಿದ್ಯಾರ್ಥಿನಿಯರು ಮನೆಗೆ ವಾಪಾಸ್ಸಾಗಿದ್ದಾರೆ. ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿಗಳ ಪೋಷಕರು ಪ್ರಾಂಶುಪಾಲರ ಜೊತೆ ಮಾತುಕತೆ ನಡೆಸಿದರು.

ಇನ್ನು ಯಾವುದೇ ಅಹಿತಕರ ಘಟನೆ ನಡೆಯದಂತೆ ಕಂಕನಾಡಿ ಗ್ರಾಮಾಂತರ ಠಾಣಾ ಪೊಲೀಸರು ಬಿಗು ಬಂದೋಬಸ್ತ್ ಏರ್ಪಡಿಸಿದ್ದರು.

Leave a Reply

Your email address will not be published. Required fields are marked *

error: Content is protected !!