March 23, 2026

ಮಂಗಳೂರು: ಹೈಟೆಕ್ ವೇಶ್ಯೆವಾಟಿಕೆ ಪ್ರಕರಣ ಮತ್ತೊಬ್ಬ ಆರೋಪಿಯ ಬಂಧನ: ಒಟ್ಟು ಬಂಧಿತರ ಸಂಖ್ಯೆ 16ಕ್ಕೇರಿಕೆ

0
image_editor_output_image110365709-1647922432369.jpg

ಮಂಗಳೂರು: ನಗರದ ನಂದಿಗುಡ್ಡದಲ್ಲಿರುವ ಫ್ಲ್ಯಾಟ್‌ವೊಂದರಲ್ಲಿ ಪಿಯು ಕಾಲೇಜಿನ ಅಪ್ರಾಪ್ತ ವಿದ್ಯಾರ್ಥಿನಿಯರನ್ನು ಬ್ಲ್ಯಾಕ್‌ಮೇಲ್‌ ಮಾಡಿ ನಡೆಸುತ್ತಿದ್ದ ವೇಶ್ಯಾವಾಟಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್‌ ಇಲಾಖೆ, ಈ ಸಂಬಂಧ ಮತ್ತೆ ಓರ್ವನನ್ನು ಬಂಧಿಸಿದ್ದು, ಈವರೆಗೆ ಬಂಧಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ಇಬ್ಬರು ಅಪ್ರಾಪ್ತ ಬಾಲಕಿಯರು ನೀಡಿದ ದೂರಿನ ಮೇರೆಗೆ ಇಲ್ಲಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಅಪರಾಧಗಳಿಗೆ ಸಂಬಂಧಿಸಿದಂತೆ ಒಟ್ಟು ಹತ್ತು ಪ್ರಕರಣಗಳು ದಾಖಲಾಗಿವೆ.

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಮಾರ್ಚ್ 18 ರಂದು ಇಲ್ಲಿನ ಉಳ್ಳಾಲದ ಅಬ್ದುಲ್ ರಾಝೀಕ್ ಉಳ್ಳಾಲ್ (44) ಅಲಿಯಾಸ್ ರಫೀಕ್ ಉಳ್ಳಾಲನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಅಪ್ರಾಪ್ತ ವಯಸ್ಕರಿಗೆ ಲೈಂಗಿಕ ಕಿರುಕುಳ ಮತ್ತು ಇತರ ಅಪರಾಧಗಳಲ್ಲಿ ತೊಡಗಿರುವ ದಂಧೆಗೆ ಸಂಬಂಧಿಸಿದಂತೆ ಒಟ್ಟು 16 ಜನರನ್ನು ಇದುವರೆಗೆ ಬಂಧಿಸಲಾಗಿದ್ದು, ಅವರೆಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಸಿಸಿಬಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!