ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗೆ 50 ರೂ. ಹೆಚ್ಚಳ
ನವದೆಹಲಿ: ಅಂತರರಾಷ್ಟ್ರೀಯ ಇಂಧನ ಬೆಲೆಗಳ ಏರಿಕೆಗೆ ಅನುಗುಣವಾಗಿ ಅಡುಗೆ ಅನಿಲ (ಎಲ್‌ಪಿಜಿ) ಪ್ರತಿ ಸಿಲಿಂಡರ್ ದರವನ್ನು ಮಂಗಳವಾರ ₹50ರಂತೆ ಹೆಚ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದರಿಂದಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಬ್ಸಿಡಿ ಇಲ್ಲದ 14.2 ಕೆ.ಜಿ. ತೂಕದ ಎಲ್‌ಪಿಜಿ ಸಿಲಿಂಡರ್ ಬೆಲೆ ₹ 949ಕ್ಕೆ ತಲುಪಿದೆ
ಕಳೆದ ಅಕ್ಟೋಬರ್‌ನಿಂದೀಚೆಗೆ ಇದು ಮೊದಲ ಬಾರಿಗೆ ಏರಿಕೆಯಾಗಿದೆ. ಕಚ್ಛಾ ತೈಲದ ಬೆಲೆ ಏರಿಕೆಯಾಗುತ್ತಿದ್ದರೂ ಕಳೆದ ಕೆಲ ತಿಂಗಳಿನಿಂದ ಎಲ್‌ಪಿಜಿ ದರ ಸ್ಥಿರವಾಗಿ ಉಳಿದಿತ್ತು.
5 ಕೆ.ಜಿ. ಸಿಲಿಂಡರ್ ಬೆಲೆ ₹ 349 ಆಗಿದ್ದರೆ, 10 ಕೆ.ಜಿ.ಯ ಸಿಲಿಂಡರ್ ಬೆಲೆ ₹ 669 ಆಗಿದೆ.
19 ಕೆ.ಜಿ. ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ₹ 2003.50 ರಷ್ಟಾಗಿದೆ.




