ಭ್ರಷ್ಟಾಚಾರ ಆರೋಪ: 9 ಕಡೆಗಳಲ್ಲಿ ನೂರಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ ದಾಳಿ
ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ಹಲವು ಅಧಿಕಾರಿಗಳ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಇಂದು ಬೆಂಗಳೂರಿನ 9 ಕಡೆಗಳಲ್ಲಿ ನೂರಕ್ಕೂ ಹೆಚ್ಚು ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.
ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಹಾಗೂ ಇನ್ನಿತರ ಜಾಗಗಳ ಮೇಲೆ ದಾಳಿ ನಡೆದಿದ್ದು, ಕಡತಗಳ ಪರಿಶೀಲನೆಯನ್ನು ನಡೆಯುತ್ತಿದೆ.
ಮಧ್ಯವರ್ತಿಗಳು/ಏಜೆಂಟರು/ ಭ್ರಷ್ಟ/ಅಕ್ರಮ ವಿಧಾನಗಳಿಂದ ಸಾರ್ವಜನಿಕ ಸೇವಕರ ಮೇಲೆ ಪ್ರಭಾವ ಬೀರುವ/ತಮ್ಮ ವೈಯಕ್ತಿಕ ಪ್ರಭಾವದ ಮೂಲಕ ಬೆಂಗಳೂರಿನ ಚಟುವಟಿಕೆಗಳಲ್ಲಿ ಅವ್ಯವಹಾರಗಳು ಮತ್ತು ಇತರ ಅಕ್ರಮಗಳಲ್ಲಿ ತೊಡಗಿರುವ ಶಂಕಿತರಿಗೆ ಸಂಬಂಧಿಸಿದಂತೆ 9 ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿದೆ.




