ಆದಾಯಕ್ಕೂ ಮೀರಿ ಆಸ್ತಿ ಗಳಿಕೆ: ವಸತಿ ಸಚಿವ ಸೋಮಣ್ಣ ವಿರುದ್ಧ ಸಮನ್ಸ್ ಜಾರಿ
ಬೆಂಗಳೂರು: ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ ಆರೋಪದ ಮೇಲೆ ವಸತಿ ಸಚಿವ ವಿ. ಸೋಮಣ್ಣ ವಿರುದ್ಧ ಸಮನ್ಸ್ ಜಾರಿ ಮಾಡಲಾಗಿದೆ.
ಮುಂದಿನ ತಿಂಗಳು ಏಪ್ರಿಲ್ 16ಕ್ಕೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ನೀಡಿದೆ. ಇದು 8-9 ವರ್ಷಗಳ ಹಿಂದಿನ ಪ್ರಕರಣವಾಗಿದ್ದು, 2013ರಲ್ಲಿ ರಾಮಕೃಷ್ಣ ಎಂಬವವರು ಸಚಿವ ಸೋಮಣ್ಣ ವಿರುದ್ಧ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಖಾಸಗಿ ದೂರು ದಾಖಲಿಸಿದ್ದರು.
ಈ ಬಗ್ಗೆ ಕೋರ್ಟ್ ತನಿಖೆ ನಡೆಸಿ ವರದಿ ನೀಡುವಂತೆ ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ಸೂಚಿಸಿತ್ತು. ಆದರೆ, ಲೋಕಾಯುಕ್ತ ಪೊಲೀಸರು ಆದಾಯ ಮೀರಿ ಆಸ್ತಿ ಗಳಿಸಿಲ್ಲವೆಂದು ವರದಿ ನೀಡಿದ್ದರು. ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ನ್ನು ಕೋರ್ಟ್ ತಿರಸ್ಕರಿಸಿದೆ.




