ಪುನೀತ್ ಆರೋಗ್ಯ ಸ್ಥಿತಿ ಗಂಭೀರ:
ಏನೂ ಹೇಳಲಾಗದು; ಆಸ್ಪತ್ರೆ ವೈದ್ಯರ ಹೇಳಿಕೆ

ಬೆಂಗಳೂರು: ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತವಾಗಿರುವುದಾಗಿ ವಿಕ್ರಂ ಆಸ್ಪತ್ರೆ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಪುನೀತ್ ಆರೋಗ್ಯ ಕುರಿತಂತೆ ಹೇಳಿಕೆ ನೀಡಿದ ಆಸ್ಪತ್ರೆ ವೈದ್ಯ ಡಾ. ರಂಗನಾಥ್, ಪುನೀತ್ ರಾಜ್ ಕುಮಾರ್ ಅವರು ತೀವ್ರ ಹೃದಯ ಘಾತಕ್ಕೆ ಒಳಗಾಗಿದ್ದು, ಗಂಭೀರ ಸ್ಥಿತಿಯಲ್ಲಿರುವುದಾಗಿ ತಿಳಿಸಿದರು.
ಇಂದು ಬೆಳಗ್ಗೆ ಎದೆನೋಪು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಪುನೀತ್ ಆಸ್ಪತ್ರೆಗೆ ಬಂದು ದಾಖಲಾಗಿದ್ದಾರೆ. ಅವರ ಆರೋಗ್ಯದ ಬಗ್ಗೆ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಅವರು ಮಾಹಿತಿ ನೀಡಿದರು.