February 3, 2026

ನಟ ಪುನೀತ್ ರಾಜ್‍ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ

0
n3702403601647934191864bb31ade81ba97daf84d2b3e369139c9bf3915327825c171d275d82ddcdad77a3.jpg

ಮೈಸೂರು: ಇತ್ತೀಚೆಗೆ ಅಗಲಿದ ನಟ ಪುನೀತ್ ರಾಜಕುಮಾರ್ ಅವರಿಗೆ ಮೈಸೂರು ವಿಶ್ವವಿದ್ಯಾಲಯದ 102ನೇ ಘಟಿಕೋತ್ಸವದಲ್ಲಿ ಮರಣೋತ್ತರ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ಪುನೀತ್ ಪತ್ನಿ ಅಶ್ವಿನಿ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದರು.

ಮೈಸೂರು ವಿವಿಯ ಕ್ರಾಫಾರ್ಡ್ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ತಾವರ್ ಸಿಂಗ್ ಗೆಹ್ಲೋಟ್ ಪದವಿ ಪ್ರದಾನ ಮಾಡಿದರು.

ಮೈಸೂರು ವಿವಿ ಕುಲಪತಿ ಪ್ರೊ. ಹೇಮಂತ್ ಕುಮಾರ್, ರಾಷ್ಟ್ರೀಯ ಮೌಲ್ಯಾಂಕ ಮತ್ತು ಮಾನ್ಯತಾ ನಿರ್ದೇಶಕ ಡಾ. ಎಸ್.ಸಿ. ಶರ್ಮ, ಪದ್ಮವಿಭೂಷಣ ಡಾ. ವಾಸುದೇವ್ ಕೆ. ಆತ್ರೇ, ಜನಪದ ಕಲಾವಿದ ಮಳವಳ್ಳಿ ಮಹಾದೇವಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.
ನಟ ರಾಘವೇಂದ್ರ ರಾಜ್ ಕುಮಾರ್ ದಂಪತಿ, ನಟ ವಿನಯ್ ರಾಜ್ ಕುಮಾರ್, ರಾಜ್ ಕುಮಾರ್ ಪುತ್ರಿಲಕ್ಷ್ಮಿ ಗೋವಿಂದು ಮತ್ತಿತರರು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!