ಹಾಸನ: ಬಸ್-ಕಾರಿನ ನಡುವೆ ಭೀಕರ ಅಪಘಾತ, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತ್ಯು
ಹಾಸನ: ಹಾಸನ ಸಮೀಪದ ಸಂಕೇನಹಳ್ಳಿ ಎಂಬಲ್ಲಿ ಸಾರಿಗೆ ಬಸ್ಸು ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.
ಹಾಸನ ಸಮೀಪದ ಸಂಕೇನಹಳ್ಳಿಯಲ್ಲಿ ಈ ದುರ್ಘಟನೆ ನಡೆದಿದ್ದು, ಮೃತಪಟ್ಟವರು ಬೇಲೂರಿನ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.




