ಅಜ್ಮೀರಿಗೆ ಪ್ರವಾಸಕ್ಕೆ ತೆರಳುವುದಾಗಿ ಹೇಳಿ ದುಬೈಗೆ ತೆರಳಿದ್ದ ಇನ್‌ಸ್ಪೆಕ್ಟರ್ ಮುಹಮ್ಮದ್ ಶರೀಫ್ ಸಸ್ಪೆಂಡ್
ಮಂಗಳೂರು: ಅಜ್ಮೀರಿಗೆ ಪ್ರವಾಸಕ್ಕೆ ತೆರಳುವುದಾಗಿ ಹೇಳಿ ದುಬೈಗೆ ತೆರಳಿದ್ದ ಸಂಚಾರ ಉತ್ತರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮುಹಮ್ಮದ್ ಶರೀಫ್‌ರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಮುಹಮ್ಮದ್ ಶರೀಫ್ ಇಲಾಖೆಯ ಹಿರಿಯ ಅಧಿಕಾರಿಗಳ ಅನುಮತಿ ಪಡೆಯದೆ ದುಬೈ ಪ್ರವಾಸ ಮಾಡಿರುವ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಪೊಲೀಸ್ ಅಧಿಕಾರಿಗಳು ವಿದೇಶ ಪ್ರವಾಸ ಮಾಡುವುದಾದರೆ ಡಿಜಿಪಿ ಅವರಿಂದ ಅನುಮತಿ ಪಡೆಯಬೇಕಾಗಿದೆ. ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.





