February 1, 2026

ಗುಜರಿ ಅಂಗಡಿಗೆ ಭಾರೀ ಅಗ್ನಿ ಅವಘಡ: 11 ಮಂದಿ ಕಾರ್ಮಿಕರು ಸಜೀವ ದಹನ

0
image_editor_output_image147397577-1648010638651.jpg

ಹೈದರಾಬಾದ್‌: ಗುಜರಿ ಅಂಗಡಿಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 11 ಮಂದಿ ಸಜೀವ ದಹನಗೊಂಡ ದಾರುಣ ಘಟನೆ ಹೈದರಾಬಾದ್‌ನಲ್ಲಿನ ಸಿಕಂದರಾಬಾದ್‌ನ ಬೋಯಗುಡಾದಲ್ಲಿ ನಡೆದಿದೆ.

ಇಬ್ಬರು ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರೆಲ್ಲರೂ ಬಿಹಾರ ಮೂಲದ ವಲಸೆ ಕಾರ್ಮಿಕರು ಎಂದು ಗುರುತಿಸಲಾಗಿದೆ.

ಕಬ್ಬಿಣ ಮತ್ತು ಪ್ಲಾಸ್ಟಿಕ್ ಸ್ಕ್ರ್ಯಾಪ್ ಸಂಗ್ರಹಿಸುತ್ತಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಕನಿಷ್ಠ 11 ವಲಸೆ ಕಾರ್ಮಿಕರು ಸಜೀವ ದಹನಗೊಂಡಿದ್ದಾರೆ.

ಸಿಕಂದರಾಬಾದ್ ರೈಲ್ವೆ ನಿಲ್ದಾಣದ ಸಮೀಪವಿರುವ ಜನನಿಬಿಡ ವಸತಿ ಕಾಲೋನಿಯಲ್ಲಿ ಸುಮಾರು 13 ಕಾರ್ಮಿಕರು ಗೋದಾಮಿನ ಮೇಲಿನ ಮಹಡಿಯಲ್ಲಿ ಮಲಗಿದ್ದಾಗ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ 11 ಮಂದಿ ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಪ್ರಾಥಮಿಕ ತನಿಖೆಯಂತೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು. ಸುಮಾರು ಎಂಟು ಅಗ್ನಿಶಾಮಕಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಬೆಳಿಗ್ಗೆ 7 ರ ಸುಮಾರಿಗೆ ಬೆಂಕಿಯನ್ನು ಹತೋಟಿಗೆ ತರಲಾಯಿತು.

ಇಲ್ಲಿಯವರೆಗೆ 11 ಶವಗಳನ್ನು ವಶಪಡಿಸಿಕೊಂಡಿದ್ದು ಅವರೆಲ್ಲರೂ ಗುರುತಿಸಲಾಗದ ಸ್ಥಿತಿಯಲ್ಲಿದ್ದಾರೆ. ಮತ್ತೊಬ್ಬ ಕಾರ್ಮಿಕ ಸುಟ್ಟ ಗಾಯಗಳೊಂದಿಗೆ ಪಾರಾಗುವಲ್ಲಿ ಯಶಸ್ವಿಯಾಗಿದ್ದಾರೆ ಮತ್ತು ಅವರನ್ನು ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದೆ, ಆದರೆ ಅವರ ಸ್ಥಿತಿ ಗಂಭೀರವಾಗಿದೆ” ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!