ಪೆಟ್ರೋಲ್, ಡೀಸೆಲ್ ದರ ಮತ್ತೆ ಹೆಚ್ಚಳ: ಮುಂಬೈನಲ್ಲಿ ಪೆಟ್ರೋಲ್ ದರ 111.67 ರೂ.
ನವದೆಹಲಿ: ಸುಮಾರು ನಾಲ್ಕೂವರೆ ತಿಂಗಳ ನಂತರ ಮಂಗಳವಾರ ಪೆಟ್ರೋಲ್, ಡೀಸೆಲ್ ಬೆಲೆಯು ದೆಹಲಿಯಲ್ಲಿ ಲೀಟರಿಗೆ ತಲಾ 80 ಪೈಸೆ ಏರಿಕೆಯಾಗಿತ್ತು. ದರ ಏರಿಕೆಯು ಬುಧವಾರವೂ ಮುಂದುವರಿದಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಲೀಟರ್‌ಗೆ ತಲಾ 80 ಪೈಸೆ ಹೆಚ್ಚಿಸಲಾಗಿದೆ.
ಮಂಗಳವಾರ ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯು ಲೀಟರ್‌ಗೆ ತಲಾ 84 ಪೈಸೆಯಷ್ಟು ಆಗಿದೆ. ಹೀಗಾಗಿ, ನಿನ್ನೆಯಿಂದ ಲೀಟರ್‌ಗೆ ಒಟ್ಟು 1.64 ರೂಪಾಯಿ ಏರಿಕೆ ಆದಂತಾಗಿದೆ. ಪರಿಷ್ಕರಣೆ ಬಳಿಕ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರಿಗೆ 102.26 ರೂಪಾಯಿ ಹಾಗೂ ಡೀಸೆಲ್ ದರವು ಲೀಟರಿಗೆ 86.58 ರೂಪಾಯಿ ಆಗಿದೆ.
ರಾಜ್ಯದಿಂದ ರಾಜ್ಯಕ್ಕೆ, ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಮೌಲ್ಯವರ್ಧಿತ ತೆರಿಗೆ ಹಾಗೂ ಸಾಗಣೆ ವೆಚ್ಚ ಆಧರಿಸಿ ತೈಲ ಬೆಲೆಯಲ್ಲಿ ಬದಲಾವಣೆ ಇರುತ್ತದೆ.
ದೆಹಲಿಯಲ್ಲಿ ಇಂದು ಪ್ರತಿ ಲೀಟರ್ ಪೆಟ್ರೋಲ್ ದರ ₹97.01 ಮತ್ತು ಡೀಸೆಲ್ ದರ ₹88.27 ತಲುಪಿದೆ. ಮುಂಬೈನಲ್ಲಿ ಪೆಟ್ರೋಲ್ ದರ ₹111.67 ಮತ್ತು ಡೀಸೆಲ್ ದರ ₹95.85, ಚೆನ್ನೈನಲ್ಲಿ ಪೆಟ್ರೋಲ್ ದರ ₹102.91, ಡೀಸೆಲ್‌ಗೆ ₹92.95 ಹಾಗೂ ಕೋಲ್ಕತ್ತದಲ್ಲಿ ಪೆಟ್ರೋಲ್ ₹106.34 ಮತ್ತು ಡೀಸೆಲ್‌ಗೆ ₹91.42 ಆಗಿದೆ.




