March 21, 2026

ಶಾಲೆಯ ಗೋಡೆ ಕುಸಿತ: ಮೂವರು ವಲಸೆ ಕಾರ್ಮಿಕರು ಮೃತ್ಯು, ಹಲವರು ಗಂಭೀರ

0
image_editor_output_image-915608992-1648011827278.jpg

ಗಾಜಿಯಾಬಾದ್: ನಿರ್ಮಾಣ ಹಂತದಲ್ಲಿರುವ ಚರಂಡಿಯ ಬಳಿ ಇರುವ ಶಾಲೆಯ ಗೋಡೆ ಕುಸಿದು ಮೂವರು ವಲಸೆ ಕಾರ್ಮಿಕರು ಮೃತಪಟ್ಟು, ಇತರ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗಾಜಿಯಾಬಾದ್‌ನ ವಿಜಯನಗರ ಪ್ರದೇಶದಲ್ಲಿ ನಡೆದಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಧಾವಿಸಿ ಎಲ್ಲಾ ಕಾರ್ಮಿಕರನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದಿದು ಚಿಕಿತ್ಸೆ ನೀಡುತ್ತಿದ್ದಾರೆ.

ಡಿಎವಿ ಚೌಕ್ ಬಳಿ ಚರಂಡಿ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಇಲ್ಲಿ ಸುಮಾರು 16 ಕಾರ್ಮಿಕರು ಈ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದರು. ತಡರಾತ್ರಿ 2 ಗಂಟೆ ಸುಮಾರಿಗೆ ನಿರ್ಮಾಣ ಹಂತದಲ್ಲಿರುವ ಚರಂಡಿ ಬಳಿ ಇರುವ ಶಾಲೆಯ ಗೋಡೆ ಏಕಾಏಕಿ ಕುಸಿದು ಬಿದ್ದುದೆ.

ಇನ್ನು ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಈ ಚರಂಡಿಯ ಗುತ್ತಿಗೆ ಪಡೆದಿರುವ ಗುತ್ತಿಗೆದಾರರನ್ನು ಗುರುತಿಸಲಾಗಿದ್ದು, ಅವರ ವಿರುದ್ಧ ಶೀಘ್ರವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!