February 1, 2026

ಪತ್ರಕರ್ತನಿಗೆ ಬೆದರಿಕೆ: ನಟ ಸಲ್ಮಾನ್ ಖಾನ್ ಗೆ ಸಮನ್ಸ್ ಜಾರಿ

0
Screenshot_2022-03-23-11-05-24-79_680d03679600f7af0b4c700c6b270fe7.jpg

ಮುಂಬಯಿ: ನಟ ಸಲ್ಮಾನ್ ಖಾನ್ ಮತ್ತು ಅವರ ಅಂಗರಕ್ಷಕ ನವಾಜ್ ಶೇಖ್ ಅವರಿಗೆ 2019 ರ ವಿವಾದಕ್ಕೆ ಸಂಬಂಧಿಸಿದಂತೆ ಪತ್ರಕರ್ತರೊಬ್ಬರು ಸಲ್ಲಿಸಿದ ದೂರಿನ ಮೇರೆಗೆ ಸ್ಥಳೀಯ ನ್ಯಾಯಾಲಯ ಸಮನ್ಸ್ ನೀಡಿದೆ.

ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಆರ್.ಆರ್.ಖಾನ್ ಮಂಗಳವಾರ ತಮ್ಮ ಆದೇಶದಲ್ಲಿ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಅಪರಾಧಗಳನ್ನು ದಾಖಲು ಮಾಡಲಾಗಿದೆ ಎಂದು ಪೊಲೀಸ್ ವರದಿಯಲ್ಲಿ ಹೇಳಲಾಗಿದೆ.

ನ್ಯಾಯಾಲಯವು ಸಮನ್ಸ್ ಹೊರಡಿಸಿ ಏಪ್ರಿಲ್ 5 ರಂದು ಹೆಚ್ಚಿನ ವಿಚಾರಣೆಗೆ ವಿಷಯವನ್ನು ಮುಂದೂಡಿದೆ.

Leave a Reply

Your email address will not be published. Required fields are marked *

error: Content is protected !!