May 11, 2026

ಸುಳ್ಯ: ಬೈಕ್ – ಜೀಪು ನಡುವೆ ಅಪಘಾತ: ಬೈಕ್ ಸವಾರ ವಿದ್ಯಾರ್ಥಿ ಮೃತ್ಯು, ಮತ್ತೊಬ್ಬ ಗಂಭೀರ

0
image_editor_output_image-1778647828-1648035668894

ಸುಳ್ಯ: ಪೆರಾಜೆಯ ಕುಂಬಳಚೇರಿ ಎಂಬಲ್ಲಿ ಬೈಕ್ ಹಾಗೂ ಜೀಪು ಮಧ್ಯೆ ಅಪಘಾತ ನಡೆದು ಬೈಕ್ ನಲ್ಲಿದ್ದ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದು ಹಾಗೂ ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಇದೀಗ ಸುಳ್ಯದಿಂದ ವರದಿಯಾಗಿದೆ.

ಮೃತ ಯುವಕರು ಸುಳ್ಯದ ಸೈಂಟ್ ಜೋಸೆಫ್ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿಗಳಾಗಿದ್ದು, ಇಂದು ಪರೀಕ್ಷೆ ಮುಗಿಸಿ ಇಬ್ಬರು ಬೈಕಿನಲ್ಲಿ ಮನೆಗೆ ತೆರಳಿದ್ದ ಸಂದರ್ಭ ಕುಂಬಳಚೇರಿ ಎಂಬಲ್ಲಿ ಎದುರಿನಿಂದ ಬರುತ್ತಿದ್ದ ಜೀಪನ್ನು ತಪ್ಪಿಸಲು ಬ್ರೇಕ್ ಹಾಕಿದಾಗ ಬೈಕ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಜೀಪಿಗೆ ಡಿಕ್ಕಿ ಹೊಡೆದಿದೆ.

ಘಟನೆ ಸಂದರ್ಭ ತಲೆ ರಸ್ತೆಗೆ ತಾಗಿದ್ದು, ವಿದ್ಯಾರ್ಥಿ ವಿಶ್ವದೀಪ್ ಸ್ಥಳದಲ್ಲೇ ಮೃತಪಟ್ಟರೆ ದರ್ಶನ್ ಎಂಬ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದಾನೆ.
ಕೂಡಲೇ ಅವರಿಬ್ಬರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತರಲಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ದರ್ಶನ್ ನನ್ನು ಮಂಗಳೂರಿಗೆ ಕೊಂಡೊಯ್ಯಲಾಗಿದೆ ಎಂದು ತಿಳಿದುಬಂದಿದೆ.
ವಿಶ್ವ ದೀಪ ರವರ ಮೃತ ಶರೀರವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಯ ಮೋರ್ಚರಿಯಲ್ಲಿ ಇರಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!