March 20, 2026

ಯುಗಾದಿಯನ್ನು ಧಾರ್ಮಿಕ ದಿನವನ್ನಾಗಿ ಆಚರಿಸಲು ಸುತ್ತೋಲೆ: ಶಶಿಕಲಾ ಜೊಲ್ಲೆ

0
Shashikala_Jolle_1200_FB.jpg

ಬೆಂಗಳೂರು: ಯುಗಾದಿಯನ್ನು ಧಾರ್ಮಿಕ ದಿನವನ್ನಾಗಿ ಆಚರಣೆ ಮಾಡಲು ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಿಗೆ ಸುತ್ತೋಲೆ ಹೊರಡಿಸುವಂತೆ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಅವರು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಯುಗಾದಿ ಹಿಂದೂಗಳ ಹೊಸ ವರ್ಷ ಆರಂಭದ ದಿನ. ಕೆಲವೆಡೆ ಚಾಂದ್ರಮಾನ ಯುಗಾದಿ ಮತ್ತು ಇನ್ನು ಕೆಲವೆಡೆ ಸೌರಮಾನ ಯುಗಾದಿಯನ್ನು ಆಚರಣೆ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಚಾಂದ್ರಮಾನ-ಸೌರಮಾನ ಯುಗಾದಿಯ ದಿನಗಳಂದು ಇಲಾಖೆ ವ್ಯಾಪ್ತಿಯ ಎಲ್ಲಾ ದೇವಾಲಯಗಳಲ್ಲಿ ಧಾರ್ಮಿಕ ದಿನಾಚರಣೆ ಮಾಡಬೇಕು ಎಂದು ಸೂಚಿಸಿದ್ದಾರೆ. ಧಾರ್ಮಿಕ ದತ್ತಿ ಇಲಾಖೆಯು ಧಾರ್ಮಿಕ ಹಿನ್ನೆಲೆ ಇರುವ ಇಲಾಖೆ. ಈ ಹಿನ್ನೆಲೆಯಲ್ಲಿ ಈ ಆಚರಣೆ ಮಹತ್ವ ಪಡೆಯಲಿದೆ ಎಂದು ಸಚಿವರು ಸೂಚನೆಯಲ್ಲಿ ತಿಳಿಸಿದ್ದಾರೆ.

ವಿಶೇಷ ಪಂಚಾಂಗ ಶ್ರವಣದೊಂದಿಗೆ ಭಕ್ತಾದಿಗಳಿಗೆ ಹೊಸ ಸಂವತ್ಸರದ ಶುಭಾಶುಭ ಫಲಗಳ ಕುರಿತು ತಿಳಿದುಕೊಳ್ಳಲು ಕಾರ್ಯಕ್ರಮ ರೂಪಿಸಬೇಕು. ಚಾಂದ್ರಮಾನ ಯುಗಾದಿಯಂದು ದೇವಾಲಯಗಳಲ್ಲಿ ಬೇವು- ಬೆಲ್ಲ ವಿತರಿಸಲು ಕ್ರಮ ವಹಿಸಬೇಕು. ಪಂಚಾಂಗ ಶ್ರವಣ, ಹರಿಕಥೆ, ವಿಶೇಷ ಪೂಜೆ, ಭಜನೆ, ಹರಿಕಥೆ, ಪ್ರಸಾದ ವಿತರಣೆ ಮತ್ತಿತರ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!