March 20, 2026

ಬೈಕ್‌ಗೆ ಖಾಸಗಿ ಬಸ್ ಢಿಕ್ಕಿ: ಒಂದೇ ಕುಟುಂಬದ ನಾಲ್ವರು ಮೃತ್ಯು

0
Screenshot_2022-03-24-10-38-44-96_680d03679600f7af0b4c700c6b270fe7.jpg

ಚಿತ್ರದುರ್ಗ: ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ದಂಪತಿ, ಇಬ್ಬರು ಪುತ್ರರು ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಗ್ರಾಮದ ಬಳಿ ನಡೆದಿದೆ.

ಹೊಳಲ್ಕೆರೆ ತಾಲ್ಲೂಕಿನ ಬಿ.ದುರ್ಗಾ ಗ್ರಾಮದ ನಾಗರಾಜ್ (43), ಪತ್ನಿ ಶೈಲಜಾ (38), ಪುತ್ರ ವೀರೇಶ್ (15), ಸಂತೋಷ (13) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ನಾಗರಾಜ್ ಅವರು ಕುಟುಂಬ ಸಮೇತ ದಾವಣಗೆರೆ‌ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೆಬ್ಬಳಗೆರೆ ಗ್ರಾಮದ ಜಾತ್ರೆಗೆ ತೆರಳಿದ್ದರು. ಬುಧವಾರ ತಡರಾತ್ರಿ ಸ್ವಗ್ರಾಮಕ್ಕೆ ಒಂದೇ ದ್ವಿಚಕ್ರ ವಾಹನದಲ್ಲಿ ನಾಲ್ವರು ಮರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಹೊಳಲ್ಕೆರೆ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಖಾಸಗಿ ಬಸ್ ಬಲಬದಿಗೆ ನುಗ್ಗಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!