March 20, 2026

ಟ್ರಾನ್ಸ್ ಫಾರ್ಮರ್ ಸ್ಫೋಟ: ತಂದೆ-ಮಗಳು ಮೃತ್ಯು

0
Screenshot_2022-03-24-10-50-45-33_680d03679600f7af0b4c700c6b270fe7.jpg

ಬೆಂಗಳೂರು: ಬೆಂಗಳೂರಿನ ಮಂಗನಹಳ್ಳಿ ಸೇತುವೆ ಸಮೀಪ ಟ್ರಾನ್ಸ್ ಫಾರ್ಮರ್ ಸ್ಪೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ತಂದೆ-ಮಗಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ತಂದೆ, ಮಗಳು ನಿನ್ನೆ ಮಧ್ಯಾಹ್ನ ಮಂಗನಹಳ್ಳಿ ಸೇತುವೆ ಮಾರ್ಗವಾಗಿ ತೆರಳುತ್ತಿದ್ದಾಗ ಟ್ರಾನ್ಸ್ ಫಾರ್ಮರ್ ಸ್ಪೋಟಗೊಂಡು ಆಯಿಲ್ ಸಿಡಿದು ಬೆಂಕಿ ಹೊತ್ತುಕೊಂಡಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮಗಳ ಮದುವೆ ಕಾರ್ಯಕ್ರಮವಿದ್ದ ಕಾರಣ ಕಲ್ಯಾಣ ಮಂಟಪ ಬುಕ್ ಮಾಡಿ ಹಿಂತಿರುಗುತ್ತಿದ್ದಾಗ ಅಪ್ಪ-ಮಗಳು ಬೈಕ್‍ನಲ್ಲಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಮಂಗನಹಳ್ಳಿ ಬ್ರಿಡ್ಜ್ ಬಳಿ ಸಡನ್ ಆಗಿ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡಿದೆ. ಈ ಸ್ಫೋಟದ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ಭಸ್ಮವಾಗಿದೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ತಂದೆ ಶಿವರಾಜು, ಮಗಳು ಚೈತನ್ಯರನ್ನು ಸ್ಥಳೀಯರು ಕೂಡಲೇ ವಿಕ್ಟೋರಿಯಾ ಆಸ್ಪತ್ರೆ ರವಾನಿಸಿದ್ದರು. ತಂದೆ ಶಿವರಾಜ್ (55) ಚೈತನ್ಯ(19) ಇಬ್ಬರೂ ಕೂಡಾ ಸಾವನ್ನಪ್ಪಿದ್ದಾರೆ.

ಬುಧವಾರ ಈ ಘಟನೆ ಸಂಬಂಧ ಶಿವರಾಜು ಸಂಬಂಧಿಕರು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದೀಗ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದ ಆರೋಪದ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!