March 19, 2026

ಬೆಂಗಳೂರಿನಲ್ಲಿ ರಸ್ತೆ ಅಪಘಾತ: ಕೂರ್ನಡ್ಕ ನಿವಾಸಿ ಮೃತ್ಯು

0
image_editor_output_image83488056-1648184938986.jpg

ಪುತ್ತೂರು: ಬೆಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪುತ್ತೂರು ತಾಲೂಕಿನ ಕೂರ್ನಡ್ಕ ನಿವಾಸಿ ಆಶಿಕ್ ಸುನೈಫ್(21) ಚಿಕಿತ್ಸೆ ಫಲಕಾರಿಯಾಗದೆ ಮಾ.24 ರ ಗುರುವಾರ ಮೃತಪಟ್ಟಿದ್ದಾರೆ.

ಪುತ್ತೂರಿನ ಬಸ್ ಸ್ಟ್ಯಾಂಡ್ ಬಳಿಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಆಶಿಕ್ ಸುನೈಫ್ ಅವರು ತನ್ನ ಸ್ನೇಹಿತ ರವೂಫ್ ಎಂಬವರ ಜೊತೆಗೆ ಬೈಕ್‍ನಲ್ಲಿ ಬೆಂಗಳೂರಿಗೆ ತೆರಳಿದ್ದರು.

ಬೆಂಗಳೂರಿನ ರಾಮನಗರ ಸಮೀಪದಲ್ಲಿ ಇವರು ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿತ್ತು. ಇದರಿಂದಾಗಿ ಗಂಭೀರ ಗಾಯಗೊಂಡಿದ್ದ ಅವರನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!