March 19, 2026

ವಿವಾಹಿತ ಮಹಿಳೆಗೆ ತಂದೆಯ ಜಾತಿಯೇ ಆಧಾರ: ಹೈಕೋರ್ಟ್‌

0
image_editor_output_image-1475067647-1648185437432.jpg

ಬೆಂಗಳೂರು: ವಿವಾಹಿತ ಮಹಿಳೆಗೆ ತಂದೆಯ ಜಾತಿಯೇ ಆಧಾರ ಎಂದು ಹೇಳಿರುವ ಹೈಕೋರ್ಟ್‌, ತಂದೆಯ ಜಾತಿಯನ್ನು ಜನ್ಮದ ಆಧಾರದ ಮೇಲೆ ಮಕ್ಕಳು ಪಡೆದುಕೊಳ್ಳುತ್ತಾರೆ ಎಂದು ಸ್ಪಷ್ಟಪಡಿಸಿದೆ.

ಅನ್ಯ ಜಾತಿಯ ವ್ಯಕ್ತಿಯನ್ನು ವಿವಾಹವಾಗಿ ಪತಿಯ ಜಾತಿಯ ಆಧಾರದಲ್ಲಿ ಗ್ರಾ.ಪಂ. ಚುನಾವಣೆಯಲ್ಲಿ ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಮಹಿಳೆಯೊಬ್ಬರ ಪ್ರಕರಣದಲ್ಲಿ ಈ ರೀತಿ ತೀರ್ಪು ನೀಡಿರುವ ಹೈಕೋರ್ಟ್‌, ವಿವಾಹದ ಅನಂತರ ಪತಿಯ ಜಾತಿ ಪತ್ನಿಗೆ ವರ್ಗಾವಣೆಯಾಗುವುದಿಲ್ಲ ಎಂದು ಹೇಳಿದೆ.

ಪರಿಶಿಷ್ಟ ಪಂಗಡಕ್ಕೆ ಸೇರಿದ ವ್ಯಕ್ತಿಯನ್ನು ವಿವಾಹವಾಗಿರುವ ಆಧಾರದ ಮೇಲೆ ಗ್ರಾಮ ಪಂಚಾಯತ್‌ ಸದಸ್ಯ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದ ಸ್ಥಾನದಿಂದ ಸ್ಪರ್ಧಿಸಿ ಜಯ ಗಳಿಸಿದ್ದ ಶಿವಮೊಗ್ಗದ ಬಾಳೆಕೊಪ್ಪ ನಿವಾಸಿ ಎಂ.ಜಿ. ಅರ್ಚನಾ ಅವರ ಆಯ್ಕೆಯನ್ನು ಅಸಿಂಧುಗೊಳಿಸಿದ ಅಧೀನ ನ್ಯಾಯಾಲಯದ ತೀರ್ಪು ಎತ್ತಿ ಹಿಡಿದಿರುವ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.

Leave a Reply

Your email address will not be published. Required fields are marked *

error: Content is protected !!