ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆ ಎನ್ಐಎಗೆ ಹಸ್ತಾಂತರ
ಬೆಂಗಳೂರು: ಶಿವಮೊಗ್ಗ ಮೂಲದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ಕೈಗೆತ್ತಿಕೊಂಡಿದೆ.
ಇದಕ್ಕೂ ಮುನ್ನ ಕರ್ನಾಟಕ ಪೊಲೀಸರು ಈ ಹತ್ಯೆ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದರು. ಫೆ.20 ರಂದು ಹರ್ಷ ಹತ್ಯೆಯಾಗಿತ್ತು.
ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಎಫ್ಐಆರ್ ದಾಖಲಿಸಿದೆ. ಹತ್ಯೆ ಪ್ರಕರಣದಲ್ಲಿ ಕರ್ನಾಟಕ ಪೊಲೀಸರು ಈಗಾಗಲೇ 10 ಮಂದಿಯನ್ನು ಬಂಧಿಸಿದ್ದು ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಹರ್ಷ ಶಿವಮೊಗ್ಗದ ಕೆಲವು ಕಾಲೇಜುಗಳಲ್ಲಿ ಹಿಜಾಬ್ ನಿಷೇಧಕ್ಕೆ ಬೆಂಬಲ ಪಡೆಯಲು ಸಂಘಟನೆ ನಡೆಸುತ್ತಿದ್ದ ಆದ್ದರಿಂದ ಆತನ ಹತ್ಯೆ ಹಿಂದೆ ದೊಡ್ಡ ಷಡ್ಯಂತ್ರವೇ ಇದೆ ಎಂದು ರಾಜ್ಯ ಪೊಲೀಸ್ ಅಧಿಕಾರಿಗಳು ಶಂಕಿಸಿದ್ದರು. ಶಂಕಿತ ಆರೋಪಿಗಳನ್ನು ಶೀಘ್ರವೇ ಎನ್ಐಎ ವಶಕ್ಕೆ ಪಡೆಯಲಿದೆ.




