March 19, 2026

ಶಾಲಾ ಪಠ್ಯ ಪುಸ್ತಕದಿಂದ ಟಿಪ್ಪುಸುಲ್ತಾನ್ ಪಾಠ ಕೈ ಬಿಡುವ ಸುದ್ದಿ ಸತ್ಯಕ್ಕೆ ದೂರ: ಬಿ.ಸಿ ನಾಗೇಶ್

0
images-15.jpeg

ಬೆಂಗಳೂರು: ಶಾಲಾ ಮಕ್ಕಳ ಪಠ್ಯ ಕ್ರಮದಿಂದ ಟಿಪ್ಪುಸುಲ್ತಾನ್ ವಿಚಾರ ಕೈ ಬಿಡುವ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಶುಕ್ರವಾರ ಮಾತನಾಡಿದ ಅವರು ‘ಈ ವಿಚಾರದಲ್ಲಿ ಮಾಧ್ಯಮಗಳು ಊಹಾಪೋಹ ಸುದ್ದಿಗಳನ್ನು ಹಾಕಬಾರದು. ಸದ್ಯದಲ್ಲೇ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ವಿವರವಾಗಿ ಮಾಹಿತಿ ಕೊಡುತ್ತೇನೆ’ ಎಂದರು. ಟಿಪ್ಪು ವಿಚಾರವನ್ನ ಪಠ್ಯದಿಂದ ಕೈ ಬಿಡುವ ಸುದ್ದಿ ಸತ್ಯಕ್ಕೆ ದೂರವಾದುದ್ದು. ಒಂದಷ್ಟು ಇತಿಹಾಸದಲ್ಲಿರುವ ವಿಚಾರಗಳು ಪಠ್ಯ ಪುಸ್ತಕದಿಂದ ಕಡಗಣನೆಯಾಗಿದೆ.

ಇದನ್ನು ಉದ್ದೇಶಪೂರ್ವಕವಾಗಿ ಮಾಡಿಲ್ಲ. ಅದನ್ನು ಪರಿಚಯ ಮಾಡಲು ಪ್ರಯತ್ನ ಮಾಡಿದ್ದೇವೆ ಎಂದರು. ಏನೇನು ದೋಷಗಳು ಆಗಿದ್ದವು, ತಾಂತ್ರಿಕ ತಪ್ಪುಗಳು ಆಗಿದ್ದವು, ಅದನ್ನು ಸರಿಪಡಿಸುವ ಕೆಲಸ ಮಾಡಿದ್ದೇವೆ. ಇತಿಹಾಸವನ್ನು ತಿರುಚುವ ಪ್ರಯತ್ನ ಆಗಿತ್ತು. ಅದನ್ನು ಸರಿಪಡಿಸುವ ಕೆಲಸ ಮಾಡಿದ್ದೇವೆ. ಮಕ್ಕಳು ಓದಲೇ ಬೇಕಾದ ಪಠ್ಯವನ್ನು ಮತ್ತೆ ತರುವ ಪ್ರಯತ್ನ ಮಾಡಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಬೆರೆಸುವ ಕೆಲಸ ಮಾಡಿಲ್ಲ ಎಂದರು.

Leave a Reply

Your email address will not be published. Required fields are marked *

error: Content is protected !!