March 19, 2026

ಮಡಿಕೇರಿ: ಗೋಶಾಲೆಯ ದಶಮಾನೋತ್ಸವದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಸ್ಲಿಂ ವ್ಯಾಪಾರಿಗಳ ಅಂಗಡಿಗಳ ತೆರವು

0
Screenshot_20220325-182308_UC-Mini.jpg

ಮಡಿಕೇರಿ: ಇಲ್ಲಿನ ಶನಿವಾರಸಂತೆ ಸಮೀಪದ ತಪೋವನ ಕ್ಷೇತ್ರದ ಮನೇಹಳ್ಳಿ ಮಠದ ಬಿಲ್ವ ಗೋಶಾಲೆಯ ದಶಮಾನೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಕುಲ ಗೋವು ಸಮ್ಮೇಳನ’ದಲ್ಲಿ ಮುಸ್ಲಿಂ ವ್ಯಾಪಾರಿಗಳ ಅಂಗಡಿಗಳನ್ನು ಬಜರಂಗದಳದ ಕಾರ್ಯಕರ್ತರು ತೆರವುಗೊಳಿಸಿದ್ದಾರೆ.

ಮಕ್ಕಳ ಆಟಿಕೆ ವಸ್ತು, ಕಬ್ಬಿನ ಜ್ಯೂಸ್, ತಿಂಡಿ ತಿನಿಸುಗಳ ಮಳಿಗೆಯನ್ನು ಮುಸ್ಲಿಂ ಸಮುದಾಯದ ವರ್ತಕರು ಹಾಕಿದ್ದರು. ಗೋವು ಹತ್ಯೆ ಮಾಡುವರು, ಗೋವು ಸಮ್ಮೇಳನಕ್ಕೆ ಏಕೆ ಬರಬೇಕು. ಅವರಿಗೆ ಅವಕಾಶ ನೀಡುವುದಿಲ್ಲ ಹಿಂದೂಗಳು ನಡೆಸುವ ಜಾತ್ರೆಯ ವೇಳೆ ಮುಸ್ಲಿಂ ವರ್ತಕರಿಗೆ ಅವಕಾಶ ನೀಡುವುದಿಲ್ಲ. ಬೇಕಿದ್ದರೆ ಅವರ ಧಾರ್ಮಿಕ ಸ್ಥಳಗಳ ಬಳಿ ವ್ಯಾಪಾರ ಮಾಡಿಕೊಳ್ಳಲಿ ಎಂದು ಅಲ್ಲಿನ ರಸ್ತೆ ಬದಿ ಹಾಗೂ ಮೈದಾನದಲ್ಲಿ ಹಾಕಿದ್ದ ಅಂಗಡಿಗಳನ್ನು ಕಾರ್ಯಕರ್ತರು ತೆರವುಗೊಳಿಸಿದರು.

ಈ ವೇಳೆ ಸೋಮವಾರಪೇಟೆ ತಾಲ್ಲೂಕು ಸಂಚಾಲಕ ಜೀವನ್‌, ಬಜರಂಗದಳ ಪ್ರಖಂಡರಾದ ಜೀವನ್ ನೇಗಳ್ಳೆ, ಮಧು ಕಿಬ್ಬೆಟ್ಟ, ಪ್ರದೀಪ್, ಪಿ.ಕೆ.ರವಿ, ತನ್ಮಯ್, ಸತ್ಯ, ವಿಶ್ವ, ನಿಶ್ಚಿತ್, ಯಶು, ಮಂಜೇಶ, ದರ್ಶನ್ ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!