March 22, 2026

ಸರ್ಕಾರಿ ಪ್ರಾಥಮಿಕ ಶಾಲೆಯ ಛಾವಣಿ ಕುಸಿತ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

0
image_editor_output_image-970029469-1648273910326.jpg

ಮುದ್ದೇಬಿಹಾಳ: ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಯ ಛಾವಣಿ ಕುಸಿತಕ್ಕೊಳಗಾಗಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಗೆದ್ದಲಮರಿ ಗ್ರಾಮದಲ್ಲಿರುವ ಶಾಲೆಯ ಛಾವಣಿ ಕುಸಿತಕ್ಕೊಳಗಾಗಿ 2ನೇ ತರಗತಿ ವಿದ್ಯಾರ್ಥಿ ಸಚಿನ್ ಬಸವರಾಜ ಕೋಳೂರ ಹಾಗೂ 1ನೇ ತರಗತಿ ವಿದ್ಯಾರ್ಥಿ ಸಮರ್ಥ ಲಕ್ಷ್ಮಣ ಕೋಲಕಾರ ಗಾಯಗೊಂಡಿದ್ದಾರೆ. ಮೇಲ್ಚಾವಣಿಯ ಸಿಮೆಂಟ್ ತುಂಡುಗಳು ವಿದ್ಯಾರ್ಥಿಗಳ ತಲೆ ಮೇಲೆ ಬಿದ್ದ ಹಿನ್ನೆಲೆಯಲ್ಲಿ ತತ್ ಕ್ಷಣ ಶಾಲೆಯ ಮುಖ್ಯೋಪಾಧ್ಯಾಯ ಎಸ್.ಎಂ.ಜೋಗಿನ್ ಅವರು ಮಕ್ಕಳ ಹೆತ್ತವರಿಗೆ ವಿಷಯ ತಿಳಿಸಿದರು. ಬಳಿಕ ಮುದ್ದೇಬಿಹಾಳದ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆ ತಂದು ಚಿಕಿತ್ಸೆ ನೀಡಲಾಗಿದೆ.

ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಜಿ. ಮಿರ್ಜಿ ಮತ್ತಿತರರು ಆಸ್ಪತ್ರೆಗೆ ಆಗಮಿಸಿ ಮಕ್ಕಳ ಆರೋಗ್ಯ ವಿಚಾರಿಸಿದರು. ಹಳೆಯ ಮೇಲ್ಚಾವಣಿ ಬೀಳುವ ಸಾಧ್ಯತೆಯನ್ನು ಮೊದಲೇ ಶಾಲೆಯ ಶಿಕ್ಷಕರಿಗೆ ತಿಳಿಸಲಾಗಿತ್ತು. ಆದರೂ ಅದನ್ನು ರಿಪೇರಿ ಮಾಡಿಸದೆ ಅಲ್ಲೇ ಮಕ್ಕಳನ್ನು ಕುಳಿತುಕೊಳ್ಳಿಸಿ ಪಾಠ ಮಾಡಲಾಗುತ್ತಿದೆ. ಮಕ್ಕಳಿಗೆ ಏನಾದರೂ ತೊಂದರೆಯಾಗಿದ್ದರೆ ಯಾರು ಹೊಣೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!