August 21, 2026

ಮನೆಯವರ ವಿರೋಧ: ಚಲಿಸುವ ರೈಲಿಗೆ ತಲೆಕೊಟ್ಟು ಪ್ರೇಮಿಗಳ ಆತ್ಮಹತ್ಯೆ

0
Screenshot_2022-03-26-11-26-51-70_680d03679600f7af0b4c700c6b270fe7.jpg

ಬೆಂಗಳೂರು: ಚಲಿಸುವ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೊರಮಾವು ಬಳಿಯ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ.

ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಬಿಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ಚೈತನ್ಯ (19) ಮತ್ತು ಸಿರೀಶ್ (20) ಆತ್ಮಹತ್ಯೆ ಮಾಡಿಕೊಂಡವರು.

ಒಟ್ಟಿಗೆ ವಿದ್ಯಾಭ್ಯಾಸ ಮಾಡುತ್ತಿದ್ದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಮನೆಯವರ ವಿರೋಧದ ಹಿನ್ನಲೆಯಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!