ನಟ ಪುನೀತ್ ರಾಜ್‍ಕುಮಾರ್ ನಿಧನ: ಅಭಿಮಾನಿ ಹೃದಯಾಘಾತದಿಂದ ಮೃತ್ಯು
ಹನೂರು: ನಟ ಪುನೀತ್ ರಾಜ್‍ಕುಮಾರ್ ನಿಧನದ ಸುದ್ದಿ ಕೇಳಿ ಅಭಿಮಾನಿಯೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತಾಲೂಕಿನ ಮರೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪುನೀತ್ ರಾಜ್ ಕುಮಾರ್ ಅವರ ಎಲ್ಲಾ ಚಿತ್ರಗಳನ್ನು ವೀಕ್ಷಿಸುತ್ತಿದ್ದು, ಇಂದು ಮಧ್ಯಾಹ್ನ 3 ಗಂಟೆ ಸುಮಾರಿನಲ್ಲಿ ಪುನೀತ್ ರಾಜ್‍ಕುಮಾರ್ ನಿಧನದ ಸುದ್ದಿ ತಿಳಿದು ಸ್ಥಳದಲ್ಲಿಯೇ ಕುಸಿದುಬಿದ್ದಿದ್ದಾರೆ. ಕೂಡಲೇ ಗ್ರಾಮಸ್ಥರು ಚಿಕಿತ್ಸೆಗಾಗಿ ಮರೂರು ಗ್ರಾಮದಿಂದ ಪೊನ್ನಾಚಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರುವ ಮಾರ್ಗಮಧ್ಯೆದಲ್ಲಿಯೇ ಮೃತಪಟ್ಟಿದ್ದಾನೆ.
ಮೃತ ಮುನಿಸ್ವಾಮಿ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಮುನಿಯಪ್ಪನ ಅಗಲಿಕೆಗೆ ಆತನ ಸ್ನೇಹಿತರು, ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.





