September 9, 2026

ಕನ್ಯಾಡಿ: ಪಾಪ್ಯುಲರ್ ಫ್ರಂಟ್ ಕಮ್ಯುನಿಟಿ ಡೆವಲಪ್ಮೆಂಟ್ ವತಿಯಿಂದ ಬಡ‌ ಕುಟುಂಬಕ್ಕೆ ನೂತನ ಮನೆ ನಿರ್ಮಾಣಕ್ಕೆ ಚಾಲನೆ

0
IMG-20220325-WA0016.jpg

ಬೆಳ್ತಂಗಡಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಮ್ಯುನಿಟಿ ಡೆವಲಪ್ಮೆಂಟ್ ಬೆಳ್ತಂಗಡಿ ವತಿಯಿಂದ ಧರ್ಮಸ್ಥಳ ಗ್ರಾಮದ ಕನ್ಯಾಡಿ ಎಂಬಲ್ಲಿ ಬಡ ಕುಟುಂಬಕ್ಕೆ ನೂತನ ಮನೆಯ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.

ರಫೀಕ್ ಸಅದಿ ಖತೀಬರು ಬದ್ರಿಯಾ ಜುಮಾ ಮಸೀದಿ ಕನ್ಯಾಡಿ ದುಆ ಮೂಲಕ ಮನೆ ನಿರ್ಮಾಣಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪಾಪ್ಯುಲರ್ ಫ್ರಂಟ್ ಉಜಿರೆ ಡಿವಿಷನ್ ಅಧ್ಯಕ್ಷರು ಮುಹಮ್ಮದ್ ಆಲಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ಕ್ಷೇತ್ರ ಸಮಿತಿ ಸದಸ್ಯರಾದ ಹೈದರ್ ನೀರ್ಸಾಲ್, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಧರ್ಮಸ್ಥಳ ಗ್ರಾಮ ಸಮಿತಿ ಅಧ್ಯಕ್ಷರಾದ ಶಮೀಮ್ ಹಾಗೂ ಊರ ಹಿರಿಯರು, ಹಿತೈಷಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!