August 21, 2026

ಬೆಳ್ತಂಗಡಿ : ಮೆದುಳಿನ ರಕ್ತಸ್ರಾವದಿಂದ ಕೊಕ್ಕಡದ ಗ್ರಾಮಕರಣಿಕ ರೂಪೇಶ್ ನಿಧನ

0
image_editor_output_image-522729682-1648390088731.png

ಬೆಳ್ತಂಗಡಿ: ಮೆದುಳಿನ ರಕ್ತಸ್ರಾವದಿಂದ ಬಳಲಿ, ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಬೆಳ್ತಂಗಡಿ ನಿವಾಸಿ, ಗ್ರಾಮಕರಣಿಕ ರೂಪೇಶ್(38) ಮಾ.27 ರಂದು ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಗ್ರಾಮಕರಣಿಕರಾಗಿ ಸೇವೆ ಸಲ್ಲಿಸಿದ್ದ ರೂಪೇಶ್ ಅವರು ಕೊಕ್ಕಡಕ್ಕೆ ವರ್ಗಾವಣೆಗೊಂಡು ಪ್ರಸ್ತುತ ಕೊಕ್ಕಡ, ಶಿಶಿಲ, ಶಿಬಾಜೆಯ ಗ್ರಾಮಕರಣಿಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಬೆಳ್ತಂಗಡಿಯಲ್ಲಿ ವಾಸ್ತವ್ಯವಿದ್ದು, ಮಾ.18 ರಂದು ರಾತ್ರಿ ವೇಳೆ ಅಸ್ವಸ್ಥಗೊಂಡ ಅವರನ್ನು ಕೂಡಲೇ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಗಂಭೀರ ಸ್ಥಿತಿಯಲ್ಲಿದ್ದ ಇವರನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಶವವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಮರಣೋತ್ತರ ಪರೀಕ್ಷೆಗೆ ಇರಿಸಲಾಗಿದೆ.

ರೂಪೇಶ್ ಅವರು ಗ್ರಾಮಕರಣಿಕರಾಗಿ 16 ವರ್ಷ ಸೇವೆ ಸಲ್ಲಿಸಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!