September 20, 2024

ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಹಿಜಾಬ್ ಧರಿಸಿಕೊಂಡು ಎಸೆಸೆಲ್ಸಿ ಪರೀಕ್ಷೆ ಬರೆಯಬಹುದು: ದ.ಕ ಜಿಲ್ಲಾಧಿಕಾರಿ

0

ಮಂಗಳೂರು: ಹಿಜಾಬ್ ಕೋರ್ಟ್ ತೀರ್ಪಿನ ಅಸಮಾಧಾನದ ಮಧ್ಯೆಯೇ ನಾಳೆ ಎಸೆಸೆಲ್ಸಿ ಪರೀಕ್ಷೆ ನಡೆಯಲಿದೆ. ಈ ಬಗ್ಗೆ ದ.ಕ‌ ಜಿಲ್ಲಾಧಿಕಾರಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸಲಹೆಯನ್ನು ನೀಡಿದ್ದಾರೆ.

ಖಾಸಗಿ ಶಾಲೆಗಳಲ್ಲಿ ಸಮವಸ್ತ್ರದ ಭಾಗವಾಗಿ ಹಿಜಾಬ್ ಧರಿಸುತ್ತಿರುವ ವಿದ್ಯಾರ್ಥಿನಿಯರು ಆಯಾ ಕೇಂದ್ರದಲ್ಲಿ ಹಿಜಾಬ್ ಧರಿಸಿಕೊಂಡು ಎಸೆಸೆಲ್ಸಿ ಪರೀಕ್ಷೆ ಬರೆಯಬಹುದು.
ಇದು ಖಾಸಗಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಮಾತ್ರ ಅನ್ವಯವಾಗಲಿದೆ. ಸರಕಾರಿ ಶಾಲೆಗಳ ವಿದ್ಯಾರ್ಥಿನಿಯರು ಸರಕಾರ ರೂಪಿಸಿದ ಸಮವಸ್ತ್ರ ಧರಿಸಿ ಪರೀಕ್ಷೆ ಬರೆಯಬೇಕಿದೆ.

ಮಾ.25ರ ರಾಜ್ಯ ಸರಕಾರದ ಆದೇಶದಂತೆ ಪರೀಕ್ಷಾ ಕೇಂದ್ರಗಳಿಗೆ ಸರಕಾರಿ/ಅನುದಾನಿತ ಶಾಲೆಗಳ ವಿದ್ಯಾರ್ಥಿನಿಯರು ಸರಕಾರ ನಿಗದಿಪಡಿಸಿದ ಸಮವಸ್ತ್ರದಲ್ಲಿ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ಆಡಳಿತ ಮಂಡಳಿ ನಿಗದಿಪಡಿಸಿದ ಸಮವಸ್ತ್ರವನ್ನು ಧರಿಸಿಕೊಂಡು ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಅವಕಾಶವಿದೆ ಎಂದು ಡಿಸಿ ತಿಳಿಸಿದ್ದಾರೆ.

ಹಿಜಾಬ್ ಸಮವಸ್ತ್ರವನ್ನಾಗಿ ಹೊಂದಿರುವ ಶಾಲೆಗಳ ವಿದ್ಯಾರ್ಥಿಗಳು ಯಾವ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲಿದ್ದಾರೆ ಎಂಬ ಮಾಹಿತಿಯನ್ನು ಸಂಸ್ಥೆಯ ಮುಖ್ಯಸ್ಥರಿಗೆ ತಿಳಿಸಲಾಗಿದೆ ಎಂದರು.

Leave a Reply

Your email address will not be published. Required fields are marked *

error: Content is protected !!