August 21, 2026

ಗಾಂಜಾ ಮಾರಾಟ: ಐವರು ಡ್ರಗ್ಸ್ ಪೆಡ್ಲರ್ ಗಳ ಬಂಧನ, 40 ಲಕ್ಷ ರೂ. ಮೌಲ್ಯದ 102 ಕೆ.ಜಿ ಗಾಂಜಾ ವಶ

0
Screenshot_2022-03-28-12-03-42-40_680d03679600f7af0b4c700c6b270fe7.jpg

ಬೆಂಗಳೂರು: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಐವರು ಡ್ರಗ್ಸ್ ಪೆಡ್ಲರ್ ಗಳನ್ನು ಕೋರಮಂಗಲ ಪೊಲೀಸರು ಬಂಧನಕ್ಕೊಳಪಡಿಸಿದ್ದು, ರೂ.40 ಲಕ್ಷ ಮೌಲ್ಯದ 102 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಕೋರಮಂಗಲ ಒಂದನೇ ಬ್ಲಾಕ್‌ನಲ್ಲಿರುವ ಬಳ್ಳಾರಿ ಕಾಲೋನಿಗೆ ಕಳ್ಳಬಟ್ಟಿ ಮಾರಾಟ ಮಾಡಲು ಬರುತ್ತಾರೆ ಎಂಬ ಖಚಿತ ಮಾಹಿತಿ ಮೇರೆಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪುಷ್ಪಾಪುರ ಗ್ರಾಮದ ಕೆಲವರಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ ಕೋರಮಂಗಲ, ಎಚ್‌ಎಸ್‌ಆರ್‌ ಲೇಔಟ್‌, ಕೆಆರ್‌ ಪುರಂ, ಬೇಗೂರು ಮತ್ತಿತರ ಕಡೆ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.

ಆರೋಪಿಗಳ ಹಲವು ಅಪರಾಧ ಕೃತ್ಯಗಳಲ್ಲಿ ಪಾಲ್ಗೊಂಡಿದ್ದು, ಈಗಾಗಲೇ ಜೆಪಿ ನಗರ, ಮಡಿವಾಳ, ಆಡುಗೋಡಿ, ಕೋರಮಂಗಲ, ಮತ್ತು ಕೊಳ್ಳೇಗಾಲ ಪೊಲೀಸ್ ಠಾಣೆಗಳಲ್ಲಿ ಕೊಲೆ, ಚೈನ್ ಸ್ನ್ಯಾಚಿಂಗ್ ಮತ್ತು ಡ್ರಗ್ ದಂಧೆ ಪ್ರಕರಣಗಳು ದಾಖಲಾಗಿವೆ.

ಆರೋಪಿಗಳಿಂದ ಸುಮಾರು 40 ಲಕ್ಷ ಮೌಲ್ಯದ 102.200 ಕೆಜಿ ಗಾಂಜಾ ಮತ್ತು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!