ಬಿರ್‌ಭೂಮ್‌ನಲ್ಲಿನ ಸಜೀವ ದಹನ ಪ್ರಕರಣ: ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಶಾಸಕರ ನಡುವೆ ಹೊಡೆದಾಟ
ಕೋಲ್ಕತ್ತ: ಬಿರ್‌ಭೂಮ್‌ನಲ್ಲಿನ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಶಾಸಕರು ಹೊಡೆದಾಡಿಕೊಂಡ ಘಟನೆ ಸೋಮವಾರ ನಡೆದಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷದ ಶಾಸಕರು ಆಗ್ರಹಿಸಿದರು. ಆಡಳಿತ ಪಕ್ಷದ ಶಾಸಕರು ಹಾಗೂ ಪ್ರತಿಪಕ್ಷಗಳ ಶಾಸಕರ ನಡುವಣ ವಾಕ್ಸಮರ ತಾರಕಕ್ಕೇರಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಬಿರ್‌ಭೂಮ್ ಜಿಲ್ಲೆಯ ರಾಮ್‌ಪುರಹಾಟ್ ಘಟನೆ ಬಗ್ಗೆ ಚರ್ಚೆಯಾಗಬೇಕು ಎಂದು ಆಗ್ರಹಿಸಿದ ಬಿಜೆಪಿ ಶಾಸಕರ ಮೇಲೆ ಟಿಎಂಸಿ ಶಾಸಕರು ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿ ನಾಯಕ ಅಮಿತ್ ಮಾಳವೀಯ ಆರೋಪಿಸಿದ್ದು, ಹೊಡೆದಾಟದ ವಿಡಿಯೊವನ್ನು ಟ್ವೀಟ್ ಮಾಡಿದ್ದಾರೆ.





