December 16, 2025

ಗೋವಾದ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಪ್ರಮಾಣ ವಚನ ಸ್ವೀಕಾರ

0
image_editor_output_image508853765-1648457823164.jpg

ಗೋವಾ: ಪ್ರಮೋದ್ ಸಾವಂತ್ ಸೋಮವಾರ ಗೋವಾದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಮೂರು ಬಾರಿಯ ಶಾಸಕರಾದ ಸಾವಂತ್ ಎರಡನೇ ಬಾರಿಗೆ ಗೋವಾ ಮುಖ್ಯಮಂತ್ರಿಯಾಗಿದ್ದಾರೆ.

ಇಂದು ಬೆಳಗ್ಗೆ ಪಣಜಿ ಸಮೀಪದ ಬಾಂಬೋಲಿಂ ಶಾಮ ಪ್ರಸಾದ್ ಮುಖರ್ಜಿ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸಮಾರಂಭ ನಡೆದಿದ್ದು, ರಾಜ್ಯಪಾಲ ಪಿ.ಎಸ್. ಶ್ರೀಧರನ್ ಪಿಳ್ಳೈ ಪ್ರಮೋದ್ ಸಾವಂತ್‌ಗೆ ಪ್ರಮಾಣ ವಚನ ಬೋಧಿಸಿದರು.

ಇನ್ನು ಫೆಬ್ರವರಿ 14ರಂದು ಒಂದೇ ಹಂತದಲ್ಲಿ ಮತದಾನ ನಡೆದಿದ್ದು, ಮಾರ್ಚ್ 10ರಂದು ಫಲಿತಾಂಶ ಪ್ರಕಟಗೊಂಡಿತ್ತು. ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಜಯಗಳಿಸಿ ಅತಿ ದೊಡ್ಡ ಪಕ್ಷವಾಗಿತ್ತು.

Leave a Reply

Your email address will not be published. Required fields are marked *

error: Content is protected !!