August 21, 2026

ಎಸೆಸೆಲ್ಸಿ ಪರೀಕ್ಷೆಯಲ್ಲಿ ಬರೆಯಲು ಮುಂದಾಗಿದ್ದ 12 ಜನ ನಕಲಿ ಅಭ್ಯರ್ಥಿಗಳು ಪೊಲೀಸ್ ವಶಕ್ಕೆ

0
Screenshot_2022-03-28-14-29-53-68_680d03679600f7af0b4c700c6b270fe7.jpg

ಹುಮನಾಬಾದ: ಎಸ್ಎಸ್ಎಲ್‍ಸಿ ಪರೀಕ್ಷೆಯಲ್ಲಿ 12 ಜನ ನಕಲಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಮುಂದಾಗಿದ್ದು, ನಕಲಿ ಅಭ್ಯರ್ಥಿಗಳನ್ನು ಪೊಲೀಸ್ ವಶಕ್ಕೆ ಒಪ್ಪಿಸಿದ ಘಟನೆ ಪಟ್ಟಣದಲ್ಲಿ ಸೋಮವಾರ ನಡೆದಿದೆ.

ಪಟ್ಟಣದ ಶಾಹೀನ್ ಹಾಗೂ ಅಲಾಮೀನ್ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೂ ಮುಂಚೆ ಕೇಂದ್ರದ ಸಿಬಂದಿಗಳು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ನಕಲಿ ಅಭ್ಯರ್ಥಿಗಳು ಪತ್ತೆಯಾಗಿದ್ದಾರೆ.

ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಕೂಡಲೇ ಪೊಲೀಸರಿಗೆ ಹಾಗೂ ತಾಲೂಕು ಆಡಳಿತಕ್ಕೆ ಮಾಹಿತಿ ನೀಡಿದ್ದಾರೆ. ನಕಲಿ ಅಭ್ಯರ್ಥಿಗಳನ್ನು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ತಹಶೀಲ್ದಾರ ಡಾ। ಪ್ರದೀಪಕುಮಾರ ಹಿರೇಮಠ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!