ಸುರತ್ಕಲ್: ಗಂಡ ಮಲಗಿದ್ದ ವೇಳೆ ಮಕ್ಕಳೊಂದಿಗೆ ನಾಪತ್ತೆಯಾದ ಪತ್ನಿ
ಮಂಗಳೂರು: ಗಂಡ ಮನೆಯಲ್ಲಿ ಮಲಗಿದ್ದ ವೇಳೆ ತನ್ನಿಬ್ಬರು ಮಕ್ಕಳೊಂದಿಗೆ ಹೊರ ಹೋದ ಮಹಿಳೆ ನಾಪತ್ತೆಯಾದ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಪ್ಪಳ ಮೂಲದ ಹನುಮಂತ ಅವರು ಭಾರತಿ ಮಾದರ ಹಾಗೂ ಇಬ್ಬರು ಮಕ್ಕಳೊಂದಿಗೆ ಸುರತ್ಕಲ್‌ನ ಕಾಟಿಪಳ್ಳದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.
ಮಾ.21ರಂದು ರಾತ್ರಿ 8.00 ಗಂಟೆಯ ಸುಮಾರಿಗೆ ಗಂಡ ಮಲಗಿದ್ದ ವೇಳೆ ಪತ್ನಿ 11 ವರ್ಷದ ಮಗಳು ಹಾಗೂ 9 ವರ್ಷದ ಮಗನೊಂದಿಗೆ ಮನೆ ಮುಂಭಾಗಿಲಿನ ಚಿಲಕವನ್ನು ಹೊರಗಿನಿಂದ ಹಾಕಿ ಹೊರಗಡೆ ಹೋಗಿದ್ದಾರೆ.
ಅವರು ಮತ್ತೆ ವಾಪಾಸು ಮನೆಗೆ ಬಾರದೇ ಕಾಣೆಯಾಗಿದ್ದಾರೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಗಂಡ ನಾಪತ್ತೆ ದೂರು ದಾಖಲಿಸಿದ್ದಾರೆ.





