ಎಸೆಸೆಲ್ಸಿ ಪರೀಕ್ಷೆಗೆ ದ.ಕ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಗೈರು
ಮಂಗಳೂರು: ಹಿಜಾಬ್ ಸಂಘರ್ಷದ ನಡುವೆ ಎಸೆಸೆಲ್ಸಿ ಪರೀಕ್ಷೆ ಇಂದು ಆರಂಭವಾಗಿದ್ದು, ದ.ಕ. ಜಿಲ್ಲೆಯಲ್ಲಿ ಈ ಬಾರಿ ಕಳೆದ ಬಾರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಗೈರಾಗಿರುವುದು ಕಂಡು ಬಂದಿದೆ.
ಇಂದು 99 ಎಸೆಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಒಟ್ಟು 350 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಮಂಗಳೂರು ದಕ್ಷಿಣ ಶಿಕ್ಷಣಾಧಿಕಾರಿ ಕಚೇರಿ ವ್ಯಾಪ್ತಿಯ ಒಟ್ಟು 5,307 ವಿದ್ಯಾರ್ಥಿಗಳ ಪೈಕಿ 5,263 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 44 ಮಂದಿ ಗೈರು ಹಾಜರಾಗಿದ್ದಾರೆ.
ಮಂಗಳೂರು ಉತ್ತರ ಶಿಕ್ಷಣಾಧಿಕಾರಿ ಕಚೇರಿಯ ವ್ಯಾಪ್ತಿಯ ಒಟ್ಟು 5,250 ವಿದ್ಯಾರ್ಥಿಗಳ ಪೈಕಿ 5,207 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 43 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಇನ್ನು ಖಾಸಗಿ ಪರೀಕ್ಷಾ ಕೇಂದ್ರಗಳ ಪೈಕಿ ಮಂಗಳೂರು ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿ 309 ವಿದ್ಯಾರ್ಥಿಗಳ ಪೈಕಿ 262 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 47 ವಿದ್ಯಾರ್ಥಿಗಳು ಗೈರು ಹಾಗೂ ಮಂಗಳೂರು ಉತ್ತರದಲ್ಲಿ 333 ವಿದ್ಯಾರ್ಥಿಗಳ ಪೈಕಿ 283 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 50 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ದ.ಕ. ಜಿಲ್ಲಾ ಉಪ ನಿರ್ದೇಶಕ ಸುಧಾಕರ್ ಕೆ. ತಿಳಿಸಿದ್ದಾರೆ.





