August 21, 2026

ಮಂಗಳೂರು: ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ: ಸಂಪೂರ್ಣವಾಗಿ ಸುಟ್ಟು ಹೋದ ಕಾರು

0
IMG-20220329-WA0093.jpg

ಮಂಗಳೂರು: ನಿಲ್ಲಿಸಿದ್ದ ಕಾರೊಂದು ಏಕಾಎಕಿ ಬೆಂಕಿ ಹತ್ತಿಕೊಂಡು ಸುಟ್ಟು ಹೋದ ಘಟನೆ ಮಂಗಳೂರಿನ ಶಕ್ತಿನಗರದಲ್ಲಿ ಸಂಭವಿಸಿದೆ.

ಇಂದು ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.

ಶಕ್ತಿನಗರದ ಪಾರ್ಕ್ ಬಳಿ ನಿಲ್ಲಿಸಲಾಗಿದ್ದ ಕಾರು ಏಕಾಏಕಿ ಹೊತ್ತಿ ಉರಿದಿದೆ.

ಕಾರಿಗೆ ಬೆಂಕಿ ಹತ್ತುವುದನ್ನು ಗಮನಿಸಿದ ಸ್ಥಳಿಯರು ಕೂಡಲೇ ಅಗ್ನಿ ಶಾಮಕ ದಳಕ್ಕೆ ಕಾಲ್ ಮಾಡಿದ್ದು ಸ್ಥಳಕ್ಕೆ ಧಾವಿಸಿ ಬಂದ ಅಗ್ನಿಶಾಮಕ ದಳದ ಸಿಬಂದಿ ಬೆಂಕಿಯನ್ನು ನಂದಿಸಿತಾದರೂ ಅದಾಗಲೇ ಕಾರು ಸಂಪೂರ್ಣ ಸುಟ್ಟು ಹೋಗಿತ್ತು, ಘಟನೆಗೆ ಕಾರಣ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *

You may have missed

error: Content is protected !!