July 3, 2026

ಕಾಲೇಜು ಪ್ರಾಂಶುಪಾಲರ ಮೇಲೆ ಆ್ಯಸಿಡ್ ಎರಚಿ ಹಲ್ಲೆಗೆ ಯತ್ನ

0
image_editor_output_image-576761084-1648618973127.jpg

ಕಲಬುರಗಿ: ಕಾಲೇಜು ಪರಿವೀಕ್ಷಣಾ ಇನ್ಸ್ ಪೆಕ್ಟರ್ ಸ್ಥಾನ ಸಿಗಲಿಲ್ಲವೆಂಬ ಕೋಪದಿಂದ ಕಾಲೇಜು ಪ್ರಾಂಶುಪಾಲರ ಮೇಲೆ ಸಹ ಪ್ರಾಧ್ಯಾಪಕ ಆಸಿಡ್ ಎರಚಿ ಹಲ್ಲೆಗೆ ಯತ್ನಿಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಇಲ್ಲಿನ ಎಚ್ ಕೆಇ ಸೊಸೈಟಿಯ ಫಾರ್ಮಸಿ ಕಾಲೇಜಿನಲ್ಲಿ ಸಹ ಪ್ರಾಧ್ಯಾಪಕ ಶಾಂತವೀರ ಎಂಬಾತ ಕಾಲೇಜು ಪರಿವೀಕ್ಷಣಾ ಇನ್ಸ್ ಪೆಕ್ಟರ್ ಹುದ್ದೆ ಮೇಲೆ ಕಣ್ಣಿಟ್ಟಿದ್ದ. ಆದರೆ, ಕೊನೆ ಗಳಿಗೆಯಲ್ಲಿ ಆತನಿಗೆ ಈ ಹುದ್ದೆ ದೊರಕಿರಲಿಲ್ಲ.

ತನಗೆ ಈ ಹುದ್ದೆ ಸಿಗದಿರಲು ಪ್ರಾಂಶುಪಾಲ ಅರುಣ್ ಕುಮಾರ್ ಅವರ ಕೈವಾಡವೇ ಕಾರಣ ಎಂದು ಶಂಕೆ ವ್ಯಕ್ತಪಡಿಸಿದ ಶಾಂತವೀರ, ಪ್ರಾಂಶುಪಾಲರ ಮೇಲೆ ಆಸಿಡ್ ಎರಚಿ ಹಲ್ಲೆಗೆ ಮುಂದಾಗಿದ್ದಾನೆ.

ಮಾರ್ಚ್ 21ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!